ಕಾನ್ಪುರ: ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮೃತಪಟ್ಟ ಬೆನ್ನಲ್ಲೇ, ಶನಿವಾರ ಪೊಲೀಸ್ ಠಾಣೆಯ ಎದುರು ಮತ್ತೋರ್ವ ಯುವತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಚಿಕಿತ್ಸೆ ಫಲಿಸದೆ ನಿನ್ನೆ ರಾತ್ರಿ ಮೃತಪಟ್ಟಿದ್ದಾಳೆ.
ಅವದೇಶ್ ಸಿಂಗ್ ವ್ಯಕ್ತಿ ವಿವಾಹವಾಗುವುದಾಗಿ ನಂಬಿಸಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ 23 ವರ್ಷದ ಯುವತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸರು ತನ್ನ ದೂರಿನ ಕುರಿತು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ಆಕೆ ಡಿ. 16ರಂದು ಠಾಣೆ ಎದುರೇ ಬೆಂಕಿ ಹಚ್ಚಿಕೊಂಡಿದ್ದಳು. ಆಕೆಯ ದೇಹ ಶೇ. 70ರಷ್ಟು ಸುಟ್ಟು ಹೋಗಿತ್ತು.
ಆರೋಪಿ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದನು. ಪೊಲೀಸರು ಆರೋಪಿ ವಿರುದ್ಧ ಚಾರ್ಜ್ ಶೀಟ್ ದಾಖಲಿಸಿದ್ದರು.