ನವದೆಹಲಿ: ಕೇವಲ ಕೆಲ ರಾಜ್ಯಗಳಿಗೆ ಸೀಮಿತವಾಗಿರುವ ರಾಷ್ಟ್ರೀಯ ಪೌರತ್ವ ನೋಂದಣಿ ಕಾಯ್ದೆಯನ್ನು ದೇಶಾದ್ಯಂತ ಜಾರಿಗೊಳಿಸಲು ಸರ್ಕಾರ ಸಂಚು ರೂಪಿಸಿದೆ ಎಂದು ವಿಪಕ್ಷಗಳ ತೀವ್ರ ವಾಗ್ದಾಳಿ ಹಾಗೂ ಪ್ರತಿಭಟನೆ ಹಿನ್ನೆಲೆಯಲ್ಲಿ ಕೆಲ ಕಾಲ ಎನ್ ಆರ್ ಸಿ ಜಾರಿಯನ್ನು ತಡೆಹಿಡಿಯಲು ಸರ್ಕಾರ ನಿರ್ಧರಿಸಿದೆ ಎನ್ನಲಾಗುತ್ತಿದೆ.
ಭಾನುವಾರ ದೆಹಲಿಯಲ್ಲಿ ಬಿಜೆಪಿ ಆಯೋಜಿಸಿದ್ದ ಬೃಹತ್ ಬಹಿರಂಗ ಸಭೆಯನ್ನು ಉದ್ದೇಶಿಸಿ ಭಾಷಣ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ ಈ ಕುರಿತು ಸೂಕ್ಷ್ಮ ಸಂದೇಶ ನೀಡಿದ್ದಾರೆ. ಬಿಜೆಪಿಯ ಉನ್ನತ ನಾಯಕರ ಸಭೆಯಲ್ಲಿ ಕೂಡ ಈ ಕುರಿತು ಚರ್ಚೆಯಾಗಿದೆ ಎಂದು ಮೂಲಗಳು ತಿಳಿಸಿವೆ.