ಪಣಜಿ: ಕರ್ನಾಟಕ ರಾಜ್ಯಕ್ಕೆ ಕಳಸಾ ಬಂಡೂರಿ ಯೋಜನೆಗೆ ಕೇಂದ್ರ ಪರಿಸರ ಸಚಿವಾಲಯ ನಿರಾಕ್ಷೇಪಣಾ ಪತ್ರ ನೀಡಿದ್ದನ್ನು ವಿರೋಧಿಸಿ ಗೋವಾ ಕಾಂಗ್ರೆಸ್ ಘಟಕ ಭಾನುವಾರ ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸಿತು.
ಜಿಪಿಸಿಸಿ ಅಧ್ಯಕ್ಷ ಗಿರೀಶ್ ಚೋಡಾಂಕರ್ ನೇತೃತ್ವದಲ್ಲಿ ನೂರಾರು ಕಾಂಗ್ರೆಸ್ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಗೋವಾ ಸರ್ಕಾರದ ತೀವ್ರ ವಿರೋಧವಿದ್ದರೂ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಕಳಸಾ ಬಂಡೂರಿ ಯೋಜನೆಗೆ ಅನುಮತಿ ನೀಡಿರುವುದ ಅನ್ಯಾಯ. ಇದನ್ನು ಹಿಂಪಡೆಯಬೇಕು ಎಂದು ಅವರು ಒತ್ತಾಯಿಸಿದರು.