ತೆಲಂಗಾಣ: ಪೊಲೀಸರ ಎನ್ ಕೌಂಟರ್ ನಲ್ಲಿ ಮೃತಪಟ್ಟ ದಿಶಾ ಅತ್ಯಾಚಾರ ಪ್ರಕರಣದ ನಾಲ್ವರು ಆರೋಪಿಗಳ ಮೃತದೇಹಗಳ ಮರು ಮರಣೋತ್ತರ ಪರೀಕ್ಷೆಗಾಗಿ ಏಮ್ಸ್ ಆಸ್ಪತ್ರೆ ಮೂರು ವಿಧಿವಿಜ್ಞಾನ ತಜ್ಞರ ತಂಡ ರಚಿಸಿದೆ.
ಏಮ್ಸ್ ವಿಧಿವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಸುಧೀರ್ ಗುಪ್ತಾ ನೇತೃತ್ವದ ತಂಡ ನಾಳೆ ಬೆಳಗ್ಗೆ 9 ಗಂಟೆಗೆ ಹೈದರಾಬಾದ್ ನ ಗಾಂಧಿ ಆಸ್ಪತ್ರೆಯಲ್ಲಿ ಮರು ಮರಣೋತ್ತರ ಪರೀಕ್ಷೆ ನಡೆಸಲಿದೆ. ಶವಗಳ ಮರುಮರಣೋತ್ತರ ಪರೀಕ್ಷೆ ನಡೆಸುವಂತೆ ತೆಲಂಗಾಣ ಹೈಕೋರ್ಟ್ ಆದೇಶಿಸಿತ್ತು.