ನವದೆಹಲಿ: ನಿರ್ಭಯಾ ಅಪರಾಧಿಗಳ ಗಲ್ಲು ಶಿಕ್ಷೆ ಜಾರಿಗೆ ವಿಚಾರಣಾ ನ್ಯಾಯಾಲಯ ನೀಡಿರುವ ತಡೆಯಾಜ್ಞೆ ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿರುವ ಅರ್ಜಿಯ ತೀರ್ಪನ್ನು ದೆಹಲಿ ಹೈಕೋರ್ಟ್ ಕಾಯ್ದಿರಿಸಿದೆ.
ಪ್ರಕರಣದ ಅಪರಾಧಿಗಳು ಕಾನೂನಿನ ಜೊತೆ ಆಟವಾಡುತ್ತಿದ್ದಾರೆ. ಅನವಶ್ಯಕವಾಗಿ ನ್ಯಾಯಾಲಯಗಳಿಗೆ ಅರ್ಜಿಗಳನ್ನು ಸಲ್ಲಿಸಿ, ಗಲ್ಲು ಶಿಕ್ಷೆ ಜಾರಿಯನ್ನು ವಿಳಂಬ ಮಾಡುತ್ತಿದ್ದಾರೆ. ಆದ್ದರಿಂದ ಅವರನ್ನು ಪ್ರತ್ಯೇಕವಾಗಿ ಗಲ್ಲಿಗೇರಿಸಲು ಅವಕಾಶ ಕಲ್ಪಿಸಬೇಕು ಎಂದು ಕೇಂದ್ರ ಸರ್ಕಾರ ಮನವಿ ಮಾಡಿತ್ತು.