ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಡಿ.25ರಿಂದ ಜ.15ರವರೆಗೆ ಬಿಜೆಪಿ ವತಿಯಿಂದ ವ್ಯಾಪಕ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ರಾಜ್ಯದ 58,000 ಬೂತ್ ವ್ಯಾಪ್ತಿಗಳಲ್ಲಿ ಪ್ರತಿ ಬೂತ್‍ಗೆ 50ರಿಂದ 60 ಮನೆಗಳನ್ನು ಸಂಪರ್ಕಿಸಿ ಕಾಯ್ದೆ ಕುರಿತು ಸ್ಪಷ್ಟ ಮಾಹಿತಿ ನೀಡಲಾಗುವುದು. 20 ದಿನಗಳ ಅಭಿಯಾನದಲ್ಲಿ 30 ಲಕ್ಷ ಮನೆಗಳಿಗೆ ಭೇಟಿ ನೀಡಿ ಒಂದು ಕೋಟಿ ಜನರನ್ನು ತಲುಪುವ ಗುರಿಯನ್ನು ಹೊಂದಲಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ತಿಳಿಸಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಡಿ 25ರಿಂದ ಜನಜಾಗೃತಿ ಅಭಿಯಾನ
Follow Us