* ಮಹಾ ರಾಜ್ಯಪಾಲರ ಶಿಫಾರಸಿಗೆ ಕೇಂದ್ರ ಸಮ್ಮತಿ
ದೆಹಲಿ: ರಾಜ್ಯಪಾಲರ ಶಿಫಾರಸಿನನ್ವಯ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಿ ಕೇಂದ್ರ ಸರ್ಕಾರ ಆದೇಶಿಸಿದೆ.
ಮಹಾರಾಷ್ಟ್ರ ಸರ್ಕಾರ ರಚನೆಯಲ್ಲಿ ಯಾವುದೇ ಸ್ಪಷ್ಟತೆ ಬಾರದ ಹಿನ್ನೆಲೆಯಲ್ಕಿ ಕೇಂದ್ರ ಸಚಿವ ಸಂಪುಟ ಈ ನಿರ್ಧಾರ ಕೈಗೊಂಡಿದೆ.
ನಿಗದಿತ ಕಾಲಾವಧಿಯೊಳಗೆ ಯಾವುದೇ ಪಕ್ಷಗಳು ಸರ್ಕಾರ ರಚಿಸದ್ದನ್ನು ಗಮನಿಸಿದ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರುವಂತೆ ಮಂಗಳವಾರ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದರು.
