* ಎನ್ ಸಿಪಿ, ಕಾಂಗ್ರೆಸ್ ಜತೆ ಸೇರಿ ಶಿವಸೇನೆಯಿಂದ ಸರ್ಕಾರ ರಚನೆ?
ಮುಂಬೈ: ಮಹಾರಾಷ್ಟ್ರದಲ್ಲಿ ಅತಿ ದೊಡ್ಡ ಪಕ್ಷವೆನಿಸಿರುವ ಬಿಜೆಪಿ ಸರ್ಕಾರ ರಚನೆ ಕಸರತ್ತಿನಿಂದ ಹಿಂದೆ ಸರಿದಿದೆ.ಹಂಗಾಮಿ ಸಿಎಂ ದೇವೇಂದ್ರ ಫಡ್ನವೀಸ್ ಭಾನುವಾರ ನಡೆದ ಬಿಜೆಪಿ ಮಹತ್ವದ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು.ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದ್ದ ಶಿವಸೇನೆ ಸರ್ಕಾರ ರಚನೆಗೆ ಬೆಂಬಲ ನೀಡದ್ದರಿಂದ ಬಿಜೆಪಿ ಸರ್ಕಾರ ರಚನೆಗೆ ಮನವಿ ಮಾಡುತ್ತಿಲ್ಲ. ರಾಜ್ಯಪಾಲ ಕೋಶಿಯಾರ್ ಅವರಿಗೂ ಈ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ಫಡ್ನವೀಸ್ ಹೇಳಿದರು.ಬಿಜೆಪಿಯ ಈ ನಿರ್ಧಾರದಿಂದ ಶಿವಸೇನೆ ಸರ್ಕಾರ ರಚನೆಗೆ ಮನವಿ ಮಾಡುವ ಸಾಧ್ಯತೆಯಿದ್ದು, ಎನ್ ಸಿಪಿ ಹಾಗೂ ಕಾಂಗ್ರೆಸ್ ಜತೆ ಸೇರಿ ಸರ್ಕಾರ ರಚಿಸಲು ಕಸರತ್ತು ನಡೆಸಿದೆ. ಈ ಮಧ್ಯೆ, ಮತ್ತೆ ಚುನಾವಣೆ ಬೇಡ ಎಂಬ ಕಾರಣಕ್ಕೆ ಎನ್ ಸಿಪಿ ಶಿವಸೇನೆಯನ್ನು ಬೆಂಬಲಿಸುವುದಾಗಿ ಹೇಳಿದೆ.