ಮುಂಬೈ:
ತಮ್ಮ ಅಧಿಕಾರಾವಧಿ ಮುಗಿದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಶುಕ್ರವಾರ ರಾಜೀನಾಮೆ ಸಲ್ಲಿಸಿದ್ದಾರೆ.
ಶುಕ್ರವಾರ ಸಂಜೆ ರಾಜಭವನಕ್ಕೆ ತೆರಳಿ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರಿಗೆ ರಾಜೀನಾಮೆ ಸಲ್ಲಿಸಿದರು.
ಅಕ್ಟೋಬರ್ 24ರಂದೇ ವಿಧಾನಸಭೆ ಚುನಾವಣೆಯ ಫಲಿತಾಂಶ ಬಂದಿದ್ದು, 105 ಸ್ಥಾನಗಳನ್ನು ಬಿಜೆಪಿ ಪಡೆದಿದೆ. ಆದರೆ, ಮೈತ್ರಿಪಕ್ಷ ಶಿವಸೇನೆ ಸಿಎಂ ಸ್ಥಾನಕ್ಕೆ ಪಟ್ಟು ಹಿಡಿದಿರುವುದರಿಂದ ಕಳೆದೆರಡು ವಾರಗಳಿಂದ ಉಂಟಾಗಿರುವ ರಾಜಕೀಯ ಬಿಕ್ಕಟ್ಟು ಬಗೆಹರಿಯದಿರುವುದೂ ಫಡ್ನವೀಸ್ ರಾಜೀನಾಮೆಗೆ ಕಾರಣವಾಗಿದೆ.
ಮಹಾ ಸಿಎಂ ಫಡ್ನವೀಸ್ ರಾಜೀನಾಮೆ
Follow Us