
ಮುಂಬೈ: ಕಳೆದ ಸೋಮವಾರದಿಂದ ಇಲ್ಲಿನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಶ್ವಾಶಕೋಶ ಸೋಂಕಿನಿಂದ ದಾಖಲಾಗಿರುವ ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
“ಲತಾ ದೀದಿ ಅವರ ಆರೋಗ್ಯ ಸ್ಥಿರವಾಗಿದೆ, ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಅವರ ಆರೋಗ್ಯದ ಕಾಳಜಿ ವಹಿಸಿ ಅಕ್ಕರೆ ತೋರಿ ಪ್ರಾರ್ಥಿಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳು” ಎಂದು ಲತಾ ಮಂಗೇಶ್ಕರ್ ಕುಟುಂಬ ಸದಸ್ಯರು ಅವರ ಟ್ವಿಟರ್ ಖಾತೆಯ ಮೂಲಕ ಮಾಹಿತಿ ನೀಡಿದ್ದಾರೆ.
ಲತಾ ಮಂಗೇಶ್ಕರ್ ನ್ಯೂಮೋನಿಯಾ ಹಾಗೂ ಶ್ವಾಶಕೋಶ ಸೋಂಕಿನಿಂದ ಬಳಲುತ್ತಿದ್ದಾರೆ.