ದೆಹಲಿ: ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪರಿಚಿತ ಬ್ಯಾಗ್ ಪತ್ತೆಯಾಗಿದ್ದು, ಆತಂಕ ಸೃಷ್ಟಿಸಿದೆ.ವಾರಸುದಾರರಿಲ್ಲದ ಈ ಬ್ಯಾಗ್ ನಲ್ಲಿ ಆರ್ ಡಿಎಕ್ಸ್ ಇರುವುದು ಇನ್ನಷ್ಟು ಆತಂಕಕ್ಕೆ ಕಾರಣವಾಗಿದೆ. ಮುಂಜಾಗ್ರತಾ ಕ್ರಮವಾಗಿ ನಿಲ್ದಾಣದಲ್ಲಿ ಬಿಗಿಭದ್ರತೆ ಒದಗಿಸಲಾಗಿದೆ.
ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ವಿಭಾಗದ ಟರ್ಮಿನಲ್ 3ರಲ್ಲಿ ಶುಕ್ರವಾರ ಬೆಳಗ್ಗೆ ಈ ಬ್ಯಾಗ್ ಪತ್ತೆಯಾಗಿದೆ. ವಿಮಾನ ನಿಲ್ದಾಣಕ್ಕೆ ಈಗಾಗಲೇ ಬಾಂಬ್ ತಜ್ಞರ ತಂಡ, ಶ್ವಾನ ದಳ ಸ್ಥಳ ಪರಿಶೀಲನೆ ನಡೆಸಿದ್ದು, ದೆಹಲಿ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.