ಗುವಾಹಟಿ: ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿರುವ ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ, ಸಂಪೂರ್ಣ ಮಾಹಿತಿಯಿಲ್ಲದೆ ಬೇಜವಾಬ್ದಾರಿಯ ಹೇಳಿಕೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಶ್ರೀಲಂಕಾದ ವಿರುದ್ಧದ ಮೊದಲ ಟಿ 20 ಪಂದ್ಯಾವಳಿಗೆ ಮುನ್ನ ಸುದ್ದಿಗೋಷ್ಠಿಯಲ್ಲಿ ಸಿಎಎ ಕುರಿತ ಪ್ರಶ್ನೆಗೆ ಉತ್ತರಿಸಿದ ಕೊಹ್ಲಿ, ಈ ವಿಷಯದ ಕುರಿತು ನನಗೆ ಬೇಜವಾಬ್ದಾರಿಯಿಂದ ಮಾತನಾಡಲು ಬಯಸುವುದಿಲ್ಲ. ಕಾಯ್ದೆಯ ಅರ್ಥ, ಉದ್ದೇಶಗಳನ್ನು ಸಂಪೂರ್ಣವಾಗಿ ಅರಿತ ನಂತರ ಮಾತ್ರವೇ ಅದರ ಬಗ್ಗೆ ಅಭಿಪ್ರಾಯ ತಿಳಿಸಲು ನಾನು ಜವಾಬ್ದಾರನಾಗುತ್ತೇನೆ ಎಂದಿದ್ದಾರೆ.
ಸಿಎಎ; ಬೇಜವಾಬ್ದಾರಿಯಿಂದ ಹೇಳಿಕೆ ನೀಡುವುದಿಲ್ಲ- ಕೊಹ್ಲಿ
Follow Us