ಅಹಮದಾಬಾದ್: ಜಮ್ಮು-ಕಾಶ್ಮೀರ ಮತ್ತು ಲಡಾಕ್ ಇಂದು ಹೊಸ ಭವಿಷ್ಯದತ್ತ ಹೆಜ್ಜೆ ಹಾಕುತ್ತಿವೆ ಎಂದು ಗುಜರಾತ್ ನಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ.
ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ 144ನೇ ಜನ್ಮ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮೋದಿ ಮಾತನಾಡಿದರು.
ಇನ್ಮುಂದೆ ಜಮ್ಮು-ಕಾಶ್ಮೀರದಲ್ಲಿ ಸ್ಥಿರತೆ ಇರುತ್ತದೆ. ಅಲ್ಲಿ ಪಟ್ಟಭದ್ರ ಹಿತಾಸಕ್ತಿಗಳ ಆಟ ನಡೆಯಲ್ಲ ಎಂದು ಮೋದಿ ಹೇಳಿದ್ದಾರೆ.
ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಕೊಳಿಸುವ ಮೂಲಕ ಸರ್ದಾರ್ ಅವರ ಏಕತೆಯ ಕನಸನ್ನು ನನಸು ಮಾಡಲಾಗಿದೆ. “ವಿವಿಧತೆಯಲ್ಲಿ ಏಕತೆ ನಮ್ಮ ಹೆಮ್ಮೆ ಮತ್ತು ಗುರುತು” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.