ನವದೆಹಲಿ: ಪೌರತ್ವ ತಿದ್ದುಪಡಿ ಮಸೂದೆ-2019ನ್ನು ಐತಿಹಾಸಿಕ ಎಂದು ಬಣ್ಣಿಸಿರುವ ಪ್ರಧಾನಿ ನರೇಂದ್ರಮೋದಿ, ನೆರೆ ದೇಶಗಳಲ್ಲಿ ಧರ್ಮದ ಆಧಾರದ ಮೇಲೆ ಕಿರುಕುಳಕ್ಕೊಳಗಾಗಿರುವ ಜನರಿಗೆ ಹೊಸ ಕಾನೂನನ್ನು ಸುವರ್ಣಾಕ್ಷರಗಳಲ್ಲಿ ಬರೆಯಬೇಕು ಎಂದಿದ್ದಾರೆ. ಬುಧವಾರ ಬಿಜೆಪಿ ಸಂಸದೀಯ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಹೊಸ ಮಸೂದೆ ಪಾಕಿಸ್ತಾನ, ಆಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿನ ಧಾರ್ಮಿಕ ಅಲ್ಪಸಂಖ್ಯಾತರು ಎದುರಿಸುತ್ತಿರುವ ಧಾರ್ಮಿಕ ಕಿರುಕುಳವನ್ನು ಕೊನೆಗಾಣಿಸುವುದು ಮಾತ್ರವಲ್ಲದೆ, ಈ ಜನರ ಬುದುಕುಗಳಲ್ಲಿನ ಅಸ್ಥಿತರತೆಯನ್ನು ಅಂತ್ಯಗೊಳಿಸಲಿದೆ ಎಂದು ಹೇಳಿದ್ದಾರೆ.
ಹೊಸ ಪೌರತ್ವ ಕಾನೂನನ್ನು ಸುವರ್ಣಾಕ್ಷರಗಳಲ್ಲಿ ಬರೆಯಬೇಕು- ಮೋದಿ
Follow Us