* ಡಿ.9ಕ್ಕೆ ಫಲಿತಾಂಶ * ನಾಳೆಯಿಂದ ನಾಮಪತ್ರ ಸಲ್ಲಿಕೆ
ಬೆಂಗಳೂರು: ರಾಜ್ಯದ ಹದಿನೈದು ವಿಧಾನಸಭಾ ಕ್ಷೇತ್ರಗಳಿಗೆ ಡಿ.5ರಂದು ಮತದಾನ ನಡೆಯಲಿದೆ.
ರಾಜ್ಯ ಚುನಾವಣಾ ಆಯುಕ್ತ ಸಂಜೀವ್ ಕುಮಾರ್ ಭಾನುವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಡಿ.9ರಂದು ಫಲಿತಾಂಶ ಪ್ರಕಟವಾಗಲಿದೆ ಎಂದ ಅವರು, ನಾಳೆಯಿಂದಲೇ (ನ.11) ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನ.17 ನಾಮಪತ್ರ ಸಲ್ಲಿಕೆಗೆ ಕಡೆಯ ದಿನ ಎಂದರು.
ಚುನಾವಣೆ ನಡೆಸುವ ಕುರಿತಂತೆ ಆಯೋಗಕ್ಜೆ ಯಾವುದೇ ಗೊಂದಲ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಸಂಜೀವ್ ಕುಮಾರ್, ಅನರ್ಹ ಶಾಸಕರ ಕೇಸು ಸುಪ್ರೀಂ ಕೋರ್ಟ್ ನಲ್ಲಿರುವುದರಿಂದ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.