ಚೆನ್ನೈ: ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಪಾನಗೋಷ್ಠಿ ಮಾಡಿದ ನಾಲ್ವರು ಪಿಯು ವಿದ್ಯಾರ್ಥಿನಿಯರನ್ನು ತಮಿಳುನಾಡಿನ ನಾಗಪಟ್ಟಿಣಂ ಜಿಲ್ಲೆಯ ಕಾಲೇಜೊಂದು ವಜಾಗೊಳಿಸಿದೆ.
ತಮಿಳುನಾಡಿನ ಮೈಲಾಡುತುರೈನಲ್ಲಿರುವ ಖಾಸಗಿ ಕಾಲೇಜು ಆಡಳಿತ ಮಂಡಳಿ ಈ ವಜಾ ಕ್ರಮ ಕೈಗೊಂಡಿದ್ದು, ವಿದ್ಯಾರ್ಥಿನಿಯರು ಬಿಯರ್ ಸೇವಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದೇ ಇಷ್ಟಕ್ಕೆಲ್ಲ ಕಾರಣವಾಗಿದೆ.
ಕಾಲೇಜು ಸಮವಸ್ತ್ರ ಧರಿಸಿ ಮದ್ಯ ಸೇವನೆ ಮಾಡಿರುವುದರಿಂದ ಮೂವರು ವಿದ್ಯಾರ್ಥಿನಿಯರು ಸೇರಿ ನಾಲ್ವರನ್ನು ವಜಾಗೊಳಿಸಲಾಗಿದೆ ಎಂದು ಪ್ರಾಂಶುಪಾಲ ಸ್ವಾಮಿನಾಥನ್ ತಿಳಿಸಿದ್ದಾರೆ.
ಬಿಯರ್ ಕುಡಿದ 4 ವಿದ್ಯಾರ್ಥಿನಿಯರು ವಜಾ
Follow Us