ನವದೆಹಲಿ: ಛತ್ತೀಸ್ ಗಢದಲ್ಲಿ ಮತ್ತೊಮ್ಮೆ ಕಾಣಿಸಿಕೊಂಡ ಹಕ್ಕಿ ಜ್ವರ ಕಾಣಿಸಿಕೊಂಡಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ 15 ಸಾವಿರ ಕೋಳಿಗಳ ಮಾರಣ ಹೋಮ ನಡೆಸಲಾಗಿದೆ. ಕೋಳಿ ಸಾಕಾಣಿಕಾ ಕೇಂದ್ರ ಮತ್ತು ಅಂಗಡಿಗಳಲ್ಲಿದ್ದ 30 ಸಾವಿರ ಮೊಟ್ಟೆಗಳನ್ನು ನಾಶಪಡಿಸಲಾಗಿದೆ. ಇಲ್ಲಿನ ಬೈಕುಂತ್ ಪುರ ಪಟ್ಟಣದ ಕೋಳಿ ಸಾಕಾಣಿಕಾ ಕೇಂದ್ರದಲ್ಲಿ ಹಕ್ಕಿಜ್ವರ ಪತ್ತೆಯಾಗಿತ್ತು. ಇಲ್ಲಿಯವರೆಗೆ ಯಾವುದೇ ಮನುಷ್ಯರಿಗೆ ಈ ಸೋಂಕು ತಗುಲಿರುವುದು ವರದಿಯಾಗಿಲ್ಲ.