ನವದೆಹಲಿ: ಸಂಸತ್‌ನ ಬಜೆಟ್ ಅಧಿವೇಶನ ಜನವರಿ ಕೊನೆಯ ವಾರದಲ್ಲಿ ಆರಂಭವಾಗಲಿದ್ದು, ಏಪ್ರಿಲ್ ವರೆಗೆ ಮುಂದುವರಿಯಲಿದೆ.
ಈ ಕುರಿತು ಸಚಿವಾಲಯದ ವಿವಾದ ಇಲಾಖೆಗಳಿಗೆ ಸೂಚನೆಗಳನ್ನು ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು ಬಜೆಟ್ ಮಂಡಿಸುವ ಸಾಧ್ಯತೆಯಿದೆ.
ಬಜೆಟ್ ಅಧಿವೇಶನದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಜಂಟಿ ಸದನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದೇ ವೇಳೆ ಆರ್ಥಿಕ ಸಮೀಕ್ಷೆ ಮಂಡಿಸುವ ಸಂಭವ ಇದೆ.
ಜನವರಿ ಕೊನೆಯ ವಾರದಲ್ಲಿ ಬಜೆಟ್ ಅಧಿವೇಶನ
Follow Us