ಮುಂಬೈ: ಕೊರೋನಾದಿಂದ ಅತಿ ಹೆಚ್ಚು ತತ್ತರಿಸಿರುವ ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 1 ಲಕ್ಷಕ್ಕೇರಿದೆ.
ಶುಕ್ರವಾರ ಕೂಡ ಮಹಾರಾಷ್ಟ್ರದಲ್ಲಿ 3,717 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ ಒಂದು ಲಕ್ಷಕ್ಕೇರಿದೆ. ಶುಕ್ರವಾರ ಕೂಡ ಮಹಾರಾಷ್ಟ್ರದಲ್ಲಿ 127 ಮಂದಿ ಸಾವನ್ನಪ್ಪಿದ್ದು ಆ ಮೂಲಕ ಮಹಾರಾಷ್ಟ್ರದಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 3,717ಕ್ಕೆ ಏರಿಕೆಯಾಗಿದೆ.
ಮಹಾರಾಷ್ಟ್ರದಲ್ಲಿ ಸೋಂಕಿತರ ಚೇತರಿಕೆ ಪ್ರಮಾಣ ಶೇ.47.3 ರಷ್ಟಿದ್ದು, ಮರಣ ಪ್ರಮಾಣ ಶೇ.3.7ರಷ್ಟಿದೆ. ರಾಜ್ಯದಲ್ಲಿ 28,200 ಮಂದಿ ಕ್ವಾರಂಟೈನ್ ನಲ್ಲಿದ್ದು, 5,79,569 ಮಂದಿ ಹೋಮ್ ಕ್ವಾರಂಟೈನ್ ನಲ್ಲಿದ್ದಾರೆ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.