ಕಿವಿ(Kiwi) ಹಣ್ಣಿನ ನಿಯಮಿತ ಸೇವನೆಯಿಂದ ರಕ್ತದೊತ್ತಡ ಕಡಿಮೆಯಾಗುವುದಲ್ಲದೇ ಹೃದಯಾಘಾತ, ಪಾರ್ಶ್ವವಾಯು ಸಮಸ್ಯೆ ಬಾರದಂತೆ ಮಾಡುತ್ತದೆ. ಇದು ರಕ್ತ ಹೆಪ್ಪುಗಟ್ಟುವಿಕೆಯನ್ನು ತಡೆಯುತ್ತದೆ.
• ಡಾ.ಅಹಲ್ಯಾ
newsics.com@gmail.com
ಹಣ್ಣುಗಳು ರುಚಿ ಮಾತ್ರವಲ್ಲದೇ ಆರೋಗ್ಯದ ದೃಷ್ಟಿಯಿಂದಲೂ ಒಳ್ಳೆಯದು. ಎಲ್ಲಾ ಹಣ್ಣುಗಳು ಒಂದಲ್ಲ ಒಂದು ಆರೋಗ್ಯಕರ ಪ್ರಯೋಜನಗಳನ್ನು ಹೊಂದಿದೆ. ನ್ಯೂಜಿಲೆಂಡ್ನಲ್ಲಿ ಹೆಚ್ಚು ಬೆಳೆಯಲಾಗುವ ಕಿವಿ(Kiwi) ಹಣ್ಣು ಈಗ ಭಾರತದಲ್ಲಿಯೂ ಜನಪ್ರಿಯವಾಗುತ್ತಿದೆ.
ಈ ಹಣ್ಣನ್ನು ತಿನ್ನುವುದರಿಂದ ರಕ್ತ ಹೆಪ್ಪುಗಟ್ಟುವಿಕೆಯನ್ನು ತಡೆಯಲು ಸಹಕಾರಿ. ರಕ್ತದಲ್ಲಿನ ಕೊಲೆಸ್ಟ್ರಾಲ್ ಪ್ರಮಾಣವನ್ನು ಕಡಿಮೆ ಮಾಡುವ ಮೂಲಕ ರಕ್ತದೊತ್ತಡ ನಿಯಂತ್ರಣದಲ್ಲಿಡಲು ಸಹಾಯಕವಾಗಿದೆ.
ಕಿವಿ ಹಣ್ಣಿನ ನಿಯಮಿತ ಸೇವನೆಯಿಂದ ರಕ್ತದೊತ್ತಡ ಕಡಿಮೆಯಾಗುವುದಲ್ಲದೇ ಹೃದಯಾಘಾತ, ಪಾರ್ಶ್ವವಾಯು ಸಮಸ್ಯೆ ಬಾರದಂತೆ ಮಾಡುತ್ತದೆ. ಲ್ಯೂಟೆನಾ ಎಂಬ ಆಂಟಿಆಕ್ಸಿಡೆಂಟ್ ಇದರಲ್ಲಿ ಹೇರಳವಾಗಿದೆ. ವಿಟಮಿನ್ ಸಿ ಕೂಡಾ ಅಧಿಕ ಪ್ರಮಾಣದಲ್ಲಿ ಇರುವುದು ರಕ್ತದೊತ್ತಡ ಕಡಿಮೆ ಮಾಡಲು ನೆರವಾಗುತ್ತದೆ.
ಕಿವಿ ಹಣ್ಣಿನಲ್ಲಿ ಸಿ ವಿಟಮಿನ್ ಹಾಗೂ ರೋಗ ನಿರೋಧಕ ಸಾಮರ್ಥ್ಯ ಇರುವುದರಿಂದ ಅಸ್ತಮಾ ಕಡಿಮೆ ಮಾಡಲು ಸಹಕಾರಿ. ಇದನ್ನು ದಿನನಿತ್ಯದ ಸೇವನೆ ಶ್ವಾಸಕೋಶಕ್ಕೆ ಸಂಬಂಧಿಸಿದ ರೋಗಗಳು ನಿವಾರಣೆಯಾಗುತ್ತವೆ.
ಈ ಹಣ್ಣನ್ನು ಸೇವಿಸುವುದರಿಂದ ಮುಖದಲ್ಲಿ ಮೊಡವೆಗಳು ಕಡಿಮೆಯಾಗುತ್ತವೆ. ಮುಖದ ಕಾಂತಿ ಹೆಚ್ಚುತ್ತದೆ. ಮೂಳೆಗಳ ಶಕ್ತಿಯನ್ನು ವರ್ಧಿಸುತ್ತದೆ. ಹಣ್ಣಿನ ನಿಯಮಿತ ಸೇವನೆಯಿಂದ ತೂಕ ಇಳಿಕೆಗೆ ಸಹಕಾರಿ.