Wednesday, November 30, 2022

ಬಲಶಾಲಿಯಾಗಲು ಬಾದಾಮಿ

Follow Us

ಇಮ್ಯುನಿಟಿ ಬೂಸ್ಟರ್ ರೆಸಿಪಿ 12

ಪವಿತ್ರಾ ಜಿಗಳೇಮನೆ
newsics.com@gmail.com

ಬಾದಾಮಿ ನಾಲಿಗೆಗೂ ರುಚಿ. ದೇಹಕ್ಕೂ ಹಿತ. ಬಾದಾಮಿಯಲ್ಲಿ ಅಧಿಕ ಖನಿಜ ಪೋಷಕಾಂಶಗಳ ಹೊರತಾಗಿ ಪ್ರೊಟೀನ್‌ಗಳು, ಫೋಲಿಕ್ ಆಮ್ಲ, ವಿಟಮಿನ್ ಇ, ಓಮೇಗಾ– 3 ಹಾಗೂ ಓಮೇಗಾ– 6 ಕೊಬ್ಬಿನಾಮ್ಲಗಳೂ ಕೂಡ ಇವೆ. ಬಾದಾಮಿ ಪಚನಕ್ರಿಯೆಯನ್ನು ಸುಧಾರಿಸುತ್ತದೆ.
ಅಲ್ಲದೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಕಡಿಮೆ ಕ್ಯಾಲರಿವುಳ್ಳ ಆಹಾರದೊಂದಿಗೆ ನೆನೆಸಿಟ್ಟಿರುವ ಬಾದಾಮಿ ಸೇವಿಸಿದಲ್ಲಿ, ಅವು ನಿಮ್ಮ ರಕ್ತದಲ್ಲಿನ ಸಕ್ಕರೆಯ ಅಂಶ, ಇನ್ಸುಲಿನ್ ನ ಅಂಶ, ಹಾಗೂ ಸೋಡಿಯಂನ ಮಟ್ಟಗಳನ್ನು ತಗ್ಗಿಸುತ್ತವೆ. ಬಾದಾಮಿ ಬೀಜಗಳು ಗರ್ಭಿಣಿಯರ ಪಾಲಿಗೆ ರಕ್ಷಾಕವಚವಿದ್ದಂತೆ.
ಬಾದಾಮಿಯನ್ನು ರಾತ್ರಿ ನೆನೆಸಿಟ್ಟು ಬೆಳಗ್ಗೆ ತಿಂದರೆ ಅದು ದೇಹವನ್ನು ಸದೃಢವಾಗಿರಿಸಲು ಸಹಾಯಕವಾಗಿದೆ.


ಬಾದಾಮಿ ಹಲ್ವಾ

ಬೇಕಾಗುವ ಸಾಮಗ್ರಿ

ಬಾದಾಮಿ – 1 ಕಪ್
ಸಕ್ಕರೆ – 1/2 ಕಪ್
ನೀರು – 5 1/2 ಕಪ್
ತುಪ್ಪ – 1/2 ಕಪ್
ಕೇಸರಿ ಕುಸುಮ – 7, 8

ಮಾಡುವ ವಿಧಾನ

ಒಂದು ಪಾತ್ರೆಗೆ 4 ಕಪ್ ನೀರನ್ನು ಸೇರಿಸಿ ಚೆನ್ನಾಗಿ ಕುದಿಸಬೇಕು. ನಂತರ ಬಾದಾಮಿಯನ್ನು ಸೇರಿಸಿ 10 ನಿಮಿಷಗಳ ಕಾಲ ಬೇಯಿಸಿ. ಬಾದಾಮಿ ಬೆಂದ ನಂತರ  ತಣ್ಣಗಾದ ಮೇಲೆ ಸಿಪ್ಪೆ ತೆಗೆದು ಬಾದಾಮಿಯನ್ನು ಮೃದುವಾಗಿ ರುಬ್ಬಿಕೊಳ್ಳಿ.

ಇನ್ನೊಂದು ಪಾತ್ರೆಯಲ್ಲಿ ಕಾಲು ಕಪ್ ನೀರನ್ನು ಬಿಸಿ ಮಾಡಿ. ಅದಕ್ಕೆ ಸಕ್ಕರೆಯನ್ನು ಸೇರಿಸಿ ಪಾಕ ಮಾಡಿಕೊಳ್ಳಿ. ಬಳಿಕ ಕೇಸರಿ ಕುಸುಮವನ್ನು ಸೇರಿಸಿ ಕೆಲವು ನಿಮಿಷಗಳ ಕಾಲ ಸಣ್ಣ ಉರಿಯಲ್ಲಿ ಚೆನ್ನಾಗಿ ಕುದಿಯಲು ಬಿಡಿ.
ಇನ್ನೊಂದು ಪಾತ್ರೆಯಲ್ಲಿ ತುಪ್ಪವನ್ನು ಬಿಸಿ ಮಾಡಿ ಅದಕ್ಕೆ ರುಬ್ಬಿಕೊಂಡ ಬಾದಾಮಿ ಪೇಸ್ಟ್ ಅನ್ನು ಸೇರಿಸಿ. 8-10 ನಿಮಿಷಗಳ ಕಾಲ ನಿರಂತರವಾಗಿ ತಿರುವುತ್ತಲೇ ಇರಬೇಕು. ನಂತರ ಸಕ್ಕರೆ ಪಾಕವನ್ನು ಸೇರಿಸಿ. ತುಪ್ಪ ಬೇರ್ಪಡುವವರೆಗೆ ಚೆನ್ನಾಗಿ ಮಿಶ್ರಣಗೊಳಿಸಿದರೆ ಬಾಯಿ ಚಪ್ಪರಿಸುವ ಬಾದಾಮಿ ಹಲ್ವಾ ಸಿದ್ಧ. ಅದು ಸಾಮಾನ್ಯ ತಾಪಮಾನಕ್ಕೆ ಬಂದ ಮೇಲೆ ಫ್ರಿಡ್ಜ್ ನಲ್ಲಿಟ್ಟು ತಣ್ಣಗಾಗಿಸಿ ಸವಿಯಿರಿ.

ಮತ್ತಷ್ಟು ಸುದ್ದಿಗಳು

vertical

Latest News

ಕೇಂದ್ರ ಜಲ ಆಯೋಗದ ಅಧ್ಯಕ್ಷರಾಗಿ ಚಂದ್ರಶೇಖರ್ ಅಯ್ಯರ್

newsics.com ನವದೆಹಲಿ: ಜಲ ತಜ್ಞ ಚಂದ್ರಶೇಖರ್ ಅಯ್ಯರ್ ಅವರು ‘ಕೇಂದ್ರ ಜಲ ಆಯೋಗದ’  ಮುಂದಿನ ಅಧ್ಯಕ್ಷರಾಗಿ ನಿಯುಕ್ತಿಯಾಗಿದ್ದಾರೆ. ಗುರುವಾರ ಡಿಸೆಂಬರ್ 1 ರಿಂದ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಚಂದ್ರಶೇಖರ್...

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ ವಾಹನ ಗಳಿಗೆ ಸಾರ್ವಜನಿಕರು ಹಾಗೂ ಪ್ರಯಾಣಿಕರಿಂದ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...
- Advertisement -
error: Content is protected !!