Wednesday, November 30, 2022

ಪುಷ್ಟಿದಾಯಕ ಪುದೀನಾ ಸೂಪ್

Follow Us

ಇಮ್ಯುನಿಟಿ ಬೂಸ್ಟರ್ ರೆಸಿಪಿ 13

ಪವಿತ್ರಾ ಜಿಗಳೇಮನೆ
newsics.com@gmail.com

ದಿನನಿತ್ಯದ ಬದುಕಿನಲ್ಲಿ ಒಂದಲ್ಲ ಒಂದು ರೀತಿಯಲ್ಲಿ ನಾವು ಪುದೀನಾ ಬಳಕೆಯನ್ನು ಮಾಡುತ್ತೇವೆ.
ನಾವು ಜಗಿಯುವ ಚ್ಯೂಯಿಂಗಮ್ ನಿಂದ ಹಿಡಿದು ಪ್ರತಿದಿನ ಬಳಸುವ ಟೂತ್ ಪೇಸ್ಟ್ ನಲ್ಲೂ ಪುದೀನಾ ಇರುತ್ತದೆ.
ಪುದೀನಾದಲ್ಲಿ ಔಷಧೀಯ ಗುಣಗಳಿವೆ ಎಂಬುದನ್ನು ಶತಮಾನಗಳಷ್ಟು ಹಿಂದೆಯೇ ಪತ್ತೆ ಮಾಡಲಾಗಿದೆ.
ಮುಖ್ಯವಾಗಿ ಶ್ವಾಸಕೋಶಗಳನ್ನು ಶುಚಿಗೊಳಿಸಲು ಪುದಿನಾ ಕೊರೋನಾ‌ ಕಾಲದಲ್ಲಿ ಹೆಚ್ಚು ನೆರವಾಗಬಲ್ಲದು. ಗಂಟಲು ಅಥವಾ ಮೂಗು ಕಟ್ಟಿಕೊಂಡಿದ್ದರೆ ಪುದೀನಾವನ್ನು ಮನೆಮದ್ದಿನ ರೂಪದಲ್ಲಿ ಬಳಸಬಹುದು. ರೋಗ ನಿರೋಧಕ ಶಕ್ತಿಯನ್ನೂ ಹೆಚ್ಚಿಸುತ್ತದೆ.
ಹಸಿವನ್ನು ಹೆಚ್ಚಿಸಿ, ಜೀರ್ಣಕ್ರಿಯೆಯನ್ನು ವೃದ್ಧಿಗೊಳಿಸಲು ಪುದೀನಾ ಸಹಕಾರಿಯಾಗಿದೆ. ದೇಹದ ಅಧಿಕ ತೂಕ ಕಡಿಮೆ ಮಾಡಿಕೊಳ್ಳುವುದಕ್ಕೂ‌ ಪುದೀನಾ ಬಳಕೆ ಅತ್ಯುತ್ತಮ.

ಪುದೀನಾ ಸೂಪ್

ಬೇಕಾಗುವ ಸಾಮಗ್ರಿ
ಪುದೀನಾ – 1/2 ಕಟ್ಟು
ಕೊತ್ತಂಬರಿ ಸೊಪ್ಪು -1/2 ಕಟ್ಟು
ಕರಿಮೆಣಸಿನ ಪುಡಿ -1/4 ಚಮಚ
ಬೆಣ್ಣೆ – 1 ಚಮಚ
ಫ್ರೆಶ್ ಕ್ರೀಂ- 1 ಚಮಚ
ರುಚಿಗೆ ತಕ್ಕಷ್ಟು ಉಪ್ಪು

ಮಾಡುವ ವಿಧಾನ

ಪುದೀನಾ ಹಾಗೂ ಕೊತ್ತಂಬರಿ ಸೊಪ್ಪನ್ನು ಚೆನ್ನಾಗಿ ತೊಳೆದು ರುಬ್ಬಿಕೊಳ್ಳಿ. ಬಳಿಕ ಅದನ್ನು ಒಂದು ಬಾಣಲೆಗೆ ಬೆಣ್ಣೆ ಹಾಕಿ. ಅದು ಕರಗಿದ ಮೇಲೆ ಅದಕ್ಕೆ ರುಬ್ಬಿಕೊಂಡ ಮಿಶ್ರಣವನ್ನು ಹಾಕಿ. ಬಳಿಕ ನೀರು, ರುಚಿಗೆ ತಕ್ಕಷ್ಟು ಉಪ್ಪು, ಕರಿಮೆಣಸಿನ ಪುಡಿ ಹಾಕಿ ಕುದಿಸಿ. ನಂತರ ಒಂದು ಬೌಲ್ ಗೆ ಹಾಕಿ ಕ್ರೀಂನಿಂದ ಅಲಂಕರಿಸಿದರೆ ಆರೋಗ್ಯಕ್ಕೆ ಹಿತವಾದ ಪುದೀನಾ ಸೂಪ್ ಸವಿಯಲು ಸಿದ್ಧ.

ಮತ್ತಷ್ಟು ಸುದ್ದಿಗಳು

vertical

Latest News

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್...

ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

newsics.com ಬೆಂಗಳೂರು:  ರಾಜಧಾನಿ ಬೆಂಗಳೂರಿನಲ್ಲಿ ಯುವತಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಟಿ ಸಿ ಪಾಳ್ಯದಲ್ಲಿ ಈ ಪ್ರಕರಣ ವರದಿಯಾಗಿದೆ. ಮೃತಪಟ್ಟ ಮಹಿಳೆಯನ್ನು ನೇಪಾಳ ಮೂಲದ ಕೃಷ್ಣ ಕುಮಾರಿ ಎಂದು...

ಕೊರೋನಾ ಬಳಿಕ ಕೇರಳದಲ್ಲಿ ಇದೀಗ ದಡಾರ ಭೀತಿ

newsics.com ತಿರುವನಂತಪುರಂ:  ಕೇರಳ ಮತ್ತು ಮಹಾರಾಷ್ಟ್ರದಲ್ಲಿ ದಡಾರ ರೋಗ ವ್ಯಾಪಕವಾಗಿ ಹರಡುತ್ತಿದೆ. ಚಿಕ್ಕಮಕ್ಕಳು ಹೆಚ್ಚಾಗಿ ಇದರ ಸೋಂಕಿಗೆ ತುತ್ತಾಗುತ್ತಿದ್ದಾರೆ. ಕೊರೋನಾದ ಬಳಿಕ ಕೇರಳದಲ್ಲಿ ಇದೀಗ ದಡಾರ ಹಾವಳಿ ಹೆಚ್ಚಾಗಿದೆ. ಕೇರಳದ  ಮಲಪ್ಪುರಂ ಜಿಲ್ಲೆಯಲ್ಲಿ  130 ದಡಾರ...
- Advertisement -
error: Content is protected !!