Wednesday, July 6, 2022

ಜೂನ್ 21ರಂದೇ ಯೋಗ ದಿನ ಆಚರಣೆ ಮಾಡುವುದು ಯಾವ ಕಾರಣಕ್ಕೆ? ಇಲ್ಲಿದೆ ಮಾಹಿತಿ

Follow Us

newsics.com

ಅನಾದಿ ಕಾಲದಿಂದಲೂ ರೂಢಿಯಲ್ಲಿರುವ ಯೋಗ ಪಾರಂಪರಿಕ ಕೊಡುಗೆಗಳಲ್ಲೊಂದು. ಆರೋಗ್ಯ ಮತ್ತು ಸರ್ವತೋಮುಖ ಬೆಳವಣಿಗೆಗೆ ಯೋಗ ಉತ್ತಮ ಸಾಧನ. 

ಯೋಗ ಕೇವಲ ವ್ಯಾಯಾಮವಲ್ಲ ಹವಾಮಾನ ಬದಲಾವಣೆ ನಿಭಾಯಿಸಲು ಮತ್ತು ಯೋಗಕ್ಷೇಮವನ್ನು ಸುಧಾರಿಸಲು ಇರುವ ಅಸ್ತ್ರವಾಗಿದೆ.

6000 ವರ್ಷಗಳ ಇತಿಹಾಸ ಹೊಂದಿರುವ‌ ಯೋಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡು ಕೇವಲ 8 ವರ್ಷವಾಗಿದೆ. ಜೂನ್ 21 ,2015ರಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಣೆ ಮಾಡಲಾಯಿತು.

ಜೂನ್ 21 ರಂದೇ ಏಕೆ‌ ಯೋಗ ದಿನ? 

ಜೂನ್ 21 ರೆಂದೇ ಯಾಕೆ ಯೋಗ ದಿನ ಆಚರಣೆ ಮಾಡಬೇಕು ಎನ್ನುವ ಬಗ್ಗೆ ಈ ಹಿಂದೆ ಪ್ರಧಾನಿ ಮೋದಿಯವರೇ ವಿವರಿಸಿದ್ದರು.

ವರ್ಷದಲ್ಲಿ ಜೂನ್‌ 21ರಂದು ಭೂಮಿಯ ಉತ್ತರ ಭಾಗದಲ್ಲಿ ಅಧಿಕ ದಿನ ಇರುತ್ತದೆ.  ಅಂದು ಉತ್ತರ ಭಾಗದಲ್ಲಿ ಹಗಲು ದೀರ್ಘಾವಧಿಯಾಗಿರುತ್ತದೆ. ದಕ್ಷಿಣದಲ್ಲಿ ಹಗಲಿನ ಅವಧಿ ಕಡಿಮೆ ಇರುತ್ತದೆ. ಅಂದು ಸೂರ್ಯ ತನ್ನ ಪಥವನ್ನು ದಕ್ಷಿಣದತ್ತ ಬದಲಿಸುತ್ತಾನೆ. ಅಂದು ಸಾಮಾನ್ಯವಾಗಿ ಹುಣ್ಣಿಮೆಯಾಗಿದ್ದು, ಗುರುಪೂರ್ಣಿಮ ದಿನವಾಗಿರುತ್ತದೆ. ಇದು ಯೋಗ ಮಾಡಲು ಅಥವಾ ಆರಂಭಿಸಲು ಸೂಕ್ತ ದಿನವಾಗಿದೆ.  ಹೀಗಾಗಿ ಜೂನ್ 21ರಂದು ಯೋಗ ದಿನಾಚರಣೆಯನ್ನು ಆಚರಿಸಬೇಕು ಎಂದು ಹೇಳಿದ್ದರು.

2015 ಜೂನ್ 21 ರಂದು ಮೊದಲ ಬಾರಿಗೆ ರಾಜ್‌ಪಥ್‌ನಲ್ಲಿ 35 ನಿಮಿಷ ಯೋಗಾಭ್ಯಾಸ ಮಾಡಿ ಯೋಗದಿನವನ್ನು ಆಚರಣೆ ಮಾಡಲಾಗಿತ್ತು.

International yoga day 2022; ಯೋಗದಿಂದ ರೋಗ ದೂರ

 

ಮತ್ತಷ್ಟು ಸುದ್ದಿಗಳು

vertical

Latest News

ಅವಧಿಗೂ ಮುನ್ನವೇ ಖೈದಿಗಳ ಬಿಡುಗಡೆ : ಕೇಂದ್ರ

newsics.com ನವದೆಹಲಿ: ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ 50 ವರ್ಷ ಮೇಲ್ಪಟ್ಟ ಮಹಿಳಾ ಖೈದಿ, ತೃತೀಯ ಲಿಂಗಿ, 60 ವರ್ಷ ಮೇಲ್ಪಟ್ಟ ಪುರುಷ ಮತ್ತು ಅಂಗವಿಕಲ ಖೈದಿಗಳನ್ನೂ ಸೆರೆವಾಸದಿಂದ...

ಸಾವಿರ ಕೋಟಿಯ ಗುರೂಜಿ ದಾರುಣ ಅಂತ್ಯ

newsics.com ಹುಬ್ಬಳ್ಳಿ; ವಾಸ್ತು ಶಾಸ್ತ್ರ  ಹೇಳುವ ಮೂಲಕ ಕರ್ನಾಟಕ ಮಾತ್ರವಲ್ಲದೆ ಇಡೀ ದೇಶಾದ್ಯಂತ ಚಿರಪರಿಚಿತರಾಗಿದ್ದ ಸರಳ ವಾಸ್ತು ಚಂದ್ರಶೇಖರ್ ಗುರೂಜಿ ಅವರನ್ನು ಇಂದು (ಜು.5) ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಆಸ್ತಿ...

ದಿಢೀರ್ ಶಬ್ದದಿಂದ ಭೂಮಿ ಸೀಳು, ಭಯಭೀತರಾದ ಶಿವಮೊಗ್ಗ ಮಂದಿ

newsics.com ಶಿವಮೊಗ್ಗ: ದಿಢೀರ್ ಶಬ್ದದಿಂದ ಭೂಮಿ ಸೀಳಾಗಿರುವ ಘಟನೆ ಸಾಗರದ ನೆಹರು ನಗರದಲ್ಲಿ ನಡೆದಿದೆ. ಒಮ್ಮೆಲೆ ಬಂದ ಶಬ್ದಕ್ಕೆ ನೆಹರು ನಗರದ ನಿವಾಸಿಗಳು ಭಯಭೀತರಾಗಿ ಹೊರಗೆ ಬಂದು ನೋಡಿದರೆ, ಭೂಮಿ ಸೀಳಾಗಿರುವುದು ಕಂಡು ಬಂದಿದೆ. ಭೂಮಿಯಿಂದ...
- Advertisement -
error: Content is protected !!