ಅಭ್ಯಾಸ ಬಲ

* ಅರುಣಕುಮಾರ್, ಚೆನ್ನೈ

[email protected]

ಮ್ಮೆ ದೇವತೆಗಳ ರಾಜನಾದ ಇಂದ್ರನು ಯಾಕೋ ರೈತರ ಮೇಲೆ ಸಿಟ್ಟು ಮಾಡಿಕೊಂಡು, “ಇನ್ನು 12 ವರ್ಷಗಳು ಮಳೆ ಸುರಿಸುವುದಿಲ್ಲ. ಇಲ್ಲಿ ಬಿತ್ತನೆ ಮಾಡಿದರೂ ಬೆಳೆಯುವುದಿಲ್ಲ ಎಂದು ಶಪಿಸಿಬಿಟ್ಟನು.
ರೈತರು ಇಂದ್ರ ದೇವನನ್ನು ಪರಿ ಪರಿಯಾಗಿ ಬೇಡಿಕೊಂಡರು. ಆಗ ಇಂದ್ರ, ದೇವ ಶಿವನು ತನ್ನ ಡಮರುಗವನ್ನು ಬಾರಿಸಿದರೆ ಮಾತ್ರ ಶಾಪ ವಿಮೋಚನೆ ಆಗುವುದು ಎಂದ. ತಕ್ಷಣ ಶಿವನ ಬಳಿ ತಾನೇ ಹೋಗಿ, ರೈತರ ಬೇಡಿಕೆಗೆ ಮಣಿದು ಡಮರುಗ ಬಾರಿಸಬಾರದೆಂದು ವಿನಂತಿಸಿ, ಒಪ್ಪಿಸಿಯೂ ಬಂದುಬಿಟ್ಟ.
ಹಾಗಾಗಿ ರೈತರು ಶಿವನ ಬಳಿ ಹೋಗಿ, ಬೇಡಿಕೊಂಡಾಗ, ಶಿವನೂ ತನ್ನ ಅಸಹಾಯಕತೆ ವ್ಯಕ್ತಪಡಿಸಿ, ಇನ್ನು 12 ವರ್ಷಗಳ ನಂತರವೇ ಡಮರುಗ ಬಾರಿಸುವುದಾಗಿ ಹೇಳಿಬಿಟ್ಟ.
ಏನು ಮಾಡಲೂ ತೋಚದ ರೈತರು 12 ವರ್ಷ ಕಾಯುವುದೆಂದು ನಿರ್ಧರಿಸಿಕೊಂಡು, ಸುಮ್ಮನಿದ್ದು ಬಿಟ್ಟರು. ಆದರೆ ಒಬ್ಬ ರೈತ ಮಾತ್ರ ಪ್ರತಿ ವರ್ಷ ತಪ್ಪದೇ ಭೂಮಿ ಉಳುತ್ತಿದ್ದ, ಬಿತ್ತನೆ ಮಾಡುತ್ತಿದ್ದ, ಗೊಬ್ಬರ ಹಾಕುತ್ತಿದ್ದ. ಬೆಳೆಯೇನೂ ಬರುತ್ತಿರಲಿಲ್ಲ ಬಿಡಿ.
3 ವರ್ಷಗಳು ಸತತವಾಗಿ ಹೀಗೇ ನಡೆದಾಗ ಉಳಿದ ರೈತರು ಇವನನ್ನು ತಮಾಷೆ ಮಾಡತೊಡಗಿದರು…
ಅವನನ್ನೇ ಕೇಳಿಯೂಬಿಟ್ಟರು…” 12 ವರ್ಷಗಳು ಮಳೆಯೂ ಬರುವುದಿಲ್ಲ, ಬೆಳೆಯೂ ಬೆಳೆಯುವುದಿಲ್ಲ ಎಂದು ಗೊತ್ತಿದ್ದರೂ ನೀನು ವ್ಯರ್ಥವಾಗಿ ಶ್ರಮವನ್ನೇಕೆ ಹಾಕುತ್ತಿದ್ದೀಯ? ಗೊಬ್ಬರ ಏಕೆ ಹಾಳು ಮಾಡುತ್ತಿದ್ದೀಯ?” ಎಂದು.
ಅದಕ್ಕೆ ರೈತ, “12 ವರ್ಷ ಮಳೆ- ಬೆಳೆ ಬರುವುದಿಲ್ಲ ಎಂದು ನನಗೆ ಗೊತ್ತಿದೆ. ಆದರೂ ಇದನ್ನೆಲ್ಲ ಮಾಡುತ್ತಿರುವುದು, ಉತ್ತನೆ, ಬಿತ್ತನೆಯ  ಅಭ್ಯಾಸ ಇರಲಿ ಎಂಬ ಕಾರಣಕ್ಕಾಗಿ. 12 ವರ್ಷಗಳ ನಂತರ ಮಳೆ ಬಂದು, ಎಲ್ಲ  ಸರಿಯಾದಾಗ, ನಾನು ಕೆಲಸವನ್ನೇ ಮರೆತು, ಅಭ್ಯಾಸವಿಲ್ಲದೇ ಸೋಮಾರಿಯಾಗಿಬಿಟ್ಟಿರಬಾರದಲ್ಲ” .
ಇದನ್ನು ಕೇಳಿದ ದೇವಿ ಪಾರ್ವತಿಗೆ ಖುಷಿಯಾಯಿತಂತೆ.  ತಾಯಿಯೂ ಶಿವನ‌ ಬಳಿ ತೆರಳಿ “12 ವರ್ಷಗಳ ಕಾಲ ನೀನೂ ಡಮರುಗ ಬಾರಿಸದಿದ್ದರೆ, ನಿನಗೆ ಅದನ್ನು ಬಾರಿಸುವುದೂ ಮರೆತುಬಿಟ್ಟರೆ ಗತಿಯೇನು?” ಎಂದು ಕೇಳಿದಳಂತೆ. ಅದಕ್ಕೆ ಭೋಲೇನಾಥನು ಯೋಚಿಸಿ ನೋಡಿ, ಕುತೂಹಲದಿಂದ ಕೂಡಲೇ ಡಮರುಗವನ್ನು ಬಾರಿಸಿದನಂತೆ.
ತಕ್ಷಣ ದೇವೇಂದ್ರನ ಮಾತಿನಂತೆ ಮಳೆಯೂ ಆಯಿತು. ಈ ರೈತನೊಬ್ಬ ಮಾತ್ರ ಬಿತ್ತಿದ್ದರಿಂದ ಇವನೊಬ್ಬನಿಗೆ ಮಾತ್ರ ಬೆಳೆ ಬಂದಿತಂತೆ. ಇವನನ್ನು ನೋಡಿ ಉಳಿದ ರೈತರೆಲ್ಲರೂ ನಿರಾಶರಾಗಿ, ತಾವೂ ಉತ್ತು, ಬಿತ್ತನೆ ಮಾಡಬೇಕಿತ್ತು ಎಂದು ಪರಿತಪಿಸಿದರಂತೆ.
ನೀತಿ:
ಒಳ್ಳೆಯ ಬದುಕು ಬೇಕೆಂದರೆ ಅದಕ್ಕೆ ಒಳ್ಳೆಯ ಅಭ್ಯಾಸಗಳಿರಲೇಬೇಕು.

LEAVE A REPLY

Please enter your comment!
Please enter your name here

Read More

ಬಂಗಾಳ ಕೊಲ್ಲಿಯಲ್ಲಿ ವಾಯು ಭಾರ ಕುಸಿತ: ಭಾರೀ ಮಳೆಯ ಮುನ್ಸೂಚನೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯು ಭಾರ ಕುಸಿತ ಸಂಭವಿಸಿದ್ದು, ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ...

ಭಯೋತ್ಪಾದಕರ ದಾಳಿಗೆ ಪೊಲೀಸ್ ಅಧಿಕಾರಿ ಬಲಿ

ಶ್ರೀನಗರ: ಜಮ್ಮು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಭಯೋತ್ಪಾದಕರು ಪೊಲೀಸ್ ಅಧಿಕಾರಿಯೊಬ್ಬರನ್ನು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಮೃತಪಟ್ಟವರನ್ನು  ಮೊಹಮ್ಮದ್ ಅಶ್ರಫ್ ಭಟ್ ಎಂದು ಗುರುತಿಸಲಾಗಿದೆ. ಸರ್ಕಲ್ ಇನ್ಸ್ ಪೆಕ್ಟರ್ ಆಗಿ ಅಶ್ರಫ್ ಭಟ್...

ಮುಂಬೈಯಲ್ಲಿ ಕೊರೋನಾಕ್ಕೆ ಒಂದೇ ದಿನ 45 ಮಂದಿ ಬಲಿ

ಮುಂಬೈ: ಮಾರಕ ಕೊರೋನಾ ಮುಂಬೈಯಲ್ಲಿ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ ಕೊರೋನಾ 45 ಮಂದಿಯನ್ನು ಬಲಿಪಡೆದುಕೊಂಡಿದೆ. ಕೊರೋನಾದಿಂದ ಮುಂಬೈಯಲ್ಲಿ ಇದುವರೆಗೆ 9776 ಮಂದಿ ಸಾವನ್ನಪ್ಪಿದ್ದಾರೆ. ಇದೇ ವೇಳೆ ಹೊಸದಾಗಿ 1233 ಮಂದಿಗೆ ಹೊಸದಾಗಿ...

Recent

error: Content is protected !!