ಬೆಂಗಳೂರು: ಎರಡು ದಿನಗಳಲ್ಲಿ ಸಂಪುಟ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಮಾಡುವ ಮೂಲಕ ಕೊಟ್ಟ ಮಾತನ್ನು ನಾನು ಉಳಿಸಿಕೊಳ್ಳುತ್ತೇನೆ ಎಂದಿದ್ದಾರೆ.
ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ನಿಜಲಿಂಗಪ್ಪರವರ 117ನೇ ಜನ್ಮ ದಿನದ ಅಂಗವಾಗಿ ಅವರ ಪ್ರತಿಮೆ ಬಳಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಉಪಚುನಾವಣೆಯಲ್ಲಿ ಗೆದ್ದ ಎಲ್ಲರಿಗೂ ಸಚಿವ ಸ್ಥಾನ ನೀಡುತ್ತೇನೆ ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದರಾದರೂ, ಸೋತವರ ಬಗ್ಗೆ ಏನನ್ನೂ ಹೇಳಿಲ್ಲ.
ಎರಡು ದಿನಗಳಲ್ಲಿ ಸಂಪುಟ ವಿಸ್ತರಣೆ: ಬಿ ಎಸ್ ವೈ
Follow Us