ಬೆಂಗಳೂರು: ಕೆಎಸ್ಆರ್ ಟಿಸಿ ಸಂಸ್ಥೆ ಪರಿಸರ ಸ್ನೇಹಿ ಕಾರ್ಯಕ್ರಮಗಳಡಿ ನಗರದ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಪ್ಲಾಸ್ಟಿಕ್ ಬಾಟಲ್ ಗಳನ್ನು ಪುಡಿ ಮಾಡಿ ಮರುಬಳಕೆ ಮಾಡುವ ಯಂತ್ರವನ್ನು ಪ್ರಾಯೋಗಿಕವಾಗಿ ಜಾರಿಗೆ ತಂದಿದೆ.
ಈ ಯಂತ್ರ ಪ್ರತಿ ದಿನ ಕನಿಷ್ಠ 4500 ಪ್ಲಾಸ್ಟಿಕ್ ಬಾಟಲಿಗಳನ್ನು ಪುಡಿ ಮಾಡಲಿದ್ದು, ಒಂದು ವರ್ಷಕ್ಕೆ ಸುಮಾರು 17.2 ಟನ್ ಪ್ಲಾಸ್ಟಿಕ್ ತ್ಯಾಜ್ಯ ಈ ಯಂತ್ರದಿಂದ ಮರುಬಳಕೆ ಆಗಲಿದೆ. ಇದರಿಂದ ರಸ್ತೆ , ಶೌಚಾಲಯದ ಕ್ಯಾಬಿನ್, ಕಸದ ಬುಟ್ಟಿಗಳು, ದಿನಚರಿ ಪುಸ್ತಕ, ಟಿ – ಶರ್ಟ್ ಗಳನ್ನು ತಯಾರಿಸಲಾಗುತ್ತದೆ.
ಮೆಜೆಸ್ಟಿಕ್ ನಲ್ಲಿ ಪ್ಲಾಸ್ಟಿಕ್ ಬಾಟಲ್ ಪುಡಿ ಮಾಡುವ ಯಂತ್ರ
Follow Us