newsics.com
ಛತ್ತೀಸ್ಗಢ: ಛತ್ತೀಸ್ಗಢದ ಜಂಜಗಿರ್ ಚಂಪಾ ಜಿಲ್ಲೆಯಲ್ಲಿ ಬೋರ್ವೆಲ್ಗೆ ಬಿದ್ದಿದ್ದ 11 ವರ್ಷದ ಬಾಲಕ ರಾಹುಲ್ ಸಾಹುವನ್ನು ಮಂಗಳವಾರ ರಾತ್ರಿ 104 ಗಂಟೆಗಳ ಕಾರ್ಯಾಚರಣೆಯ ನಂತರ ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್), ಸೇನೆ, ಸ್ಥಳೀಯ ಪೊಲೀಸರು ಮತ್ತು ಆಡಳಿತ ಸೇರಿದಂತೆ 500 ಕ್ಕೂ ಹೆಚ್ಚು ಸಿಬ್ಬಂದಿ ಶುಕ್ರವಾರ ಸಂಜೆಯಿಂದ ನಡೆಯುತ್ತಿರುವ ಬೃಹತ್ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ.
ಶುಕ್ರವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಆಟವಾಡುತ್ತಿದ್ದ ವೇಳೆ ರಾಹುಲ್ ಸಾಹು 80 ಅಡಿ ಆಳದ ಬೋರ್ವೆಲ್ಗೆ ಬಿದ್ದಿದ್ದಾರೆ.ಸಧ್ಯ ಅವರ ಸ್ಥಿತಿ ಸ್ಥಿರವಾಗಿದ್ದು, ಶೀಘ್ರದಲ್ಲೇ ಗುಣಮುಖರಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಹೊಸ ರಾಷ್ಟ್ರೀಯ ದಾಖಲೆ ಬರೆದ ಒಲಿಂಪಿಕ್ಸ್ ಚಿನ್ನದ ಹುಡುಗ ನೀರಜ್ ಚೋಪ್ರಾ