newsics.com
ಬೆಂಗಳೂರು: ವಿದ್ಯಾರ್ಥಿಗಳಿಗೆ ಉಚಿತವಾಗಿ ಶಿಕ್ಷಣ ಕೊಡಿಸುವುದಾಗಿ 18 ಕೋಟಿ ರೂ. ವಂಚಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಆಂಧ್ರಪ್ರದೇಶ ಮೂಲದ ಶ್ರೀನಿವಾಸುಲು ಎಂದು ಗುರುತಿಸಲಾಗಿದೆ. ಆರೋಪಿ ಡಾಟ ಸೈನ್ಸ್ ಕೋರ್ಸ್ ಮಾಡಿಸುವುದಾಗಿ ವಿದ್ಯಾರ್ಥಿಗಳಿಂದ ದಾಖಲೆಗಳನ್ನು ಪಡೆಯುತ್ತಿದ್ದ. ಬಳಿಕ ಅವುಗಳನ್ನು ಬ್ಯಾಂಕ್‍ನಲ್ಲಿಟ್ಟು ಲಕ್ಷಾಂತರ ರೂ. ಸಾಲ ಪಡೆಯುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಇದುವರೆಗೂ ಸುಮಾರು ಎರಡು ಸಾವಿರ ವಿದ್ಯಾರ್ಥಿಗಳಿಗೆ ವಂಚಿಸಿದ್ದಾನೆ. ಈ ಪ್ರಕರಣದಲ್ಲಿ ಬ್ಯಾಂಕ್ ಸಿಬ್ಬಂದಿಯೂ ಭಾಗಿಯಾಗಿರುವ ಶಂಕೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಮುದ್ರಕ್ಕೆ ಹಾರಿ ಮೂವರನ್ನು ರಕ್ಷಿಸಿದ ಬಿಜೆಪಿ ಶಾಸಕ, ಓರ್ವ ಯುವಕ ಸಾವು