newsics.com
ಮಂಗಳೂರು: ಬಲೂನ್ ಕಟ್ಟಿಕೊಂಡು ಕುಮಾರಧಾರ ನದಿಗೆ ಹಾರಿ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡದ ಕುದ್ಮಾರು ಗ್ರಾಮದ ಶಾಂತಿಮೊಗರು ಎಂಬಲ್ಲಿ ನಡೆದಿದೆ.
ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ನಿರ್ದೇಶಕ ಹಾಗೂ ಮಾಜಿ ಅಧ್ಯಕ್ಷ ಚಂದ್ರಶೇಖರ ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದು ಬಂದಿದೆ. ಶಾಂತಿಮೊಗರು ಸೇತುವೆಯ ಮೇಲೆ ಕಾರು ನಿಲ್ಲಿಸಿ ಬಳಿಕ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತೇಲುತ್ತಿದ್ದ ಬಲೂನ್ ಗುರುತಿನ ಆಧಾರದಲ್ಲಿ ಮೃತದೇಹವನ್ನು ಸ್ಥಳೀಯರು ಪತ್ತೆ ಮಾಡಿದ್ದಾರೆ. ಬಳಿಕ ಸ್ಥಳೀಯರು ಮೃತ ದೇಹವನ್ನು ಮೇಲಿತ್ತಿದ್ದಾರೆ. ಮೃತದೇಹ ಬೇಗ ಸಿಗಲಿ ಎಂಬ ಉದ್ದೇಶದಿಂದ ಬಲೂನ್ ಕಟ್ಟಿ ಹಾರಿರುವ ಶಂಕೆ ವ್ಯಕ್ತವಾಗಿದೆ.
ಅವರ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಪ್ರಕರಣ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ತನಿಖೆ ಕೈಗೊಂಡಿದ್ದಾರೆ.