ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ 63 ಸ್ಥಾನಗಳನ್ನು ಗೆಲ್ಲುವ ಮೂಲಕ ಆಡಳಿತಾರೂಢ ಆಮ್ ಆದ್ಮಿ ಪಕ್ಷ (ಎಎಪಿ) ಎರಡನೇ ಅವಧಿಗೆ ಬಹುಮತದ ಗೆಲುವು ಸಾಧಿಸಿದೆ. ಬಿಜೆಪಿ ಕೇವಲ 7 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಂಡಿದೆ. ಕಾಂಗ್ರೆಸ್ ಮಾತ್ರ ಒಂದೂ ಖಾತೆ ತೆರೆಯಲು ಸಮರ್ಥವಾಗಿಲ್ಲ.
ತಮಗೆ ಮತ ಹಾಕಿಸಿ ಗೆಲ್ಲಿಸಿದ ಜನತೆಗೆ ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್ ಧನ್ಯವಾದ ಸಮರ್ಪಿಸಿದ್ದಾರೆ. ಪಂಜಾಬ್ ಸೇರಿದಂತೆ ದೇಶದ ಇತರ ಎಲ್ಲಾ ಭಾಗಗಳಲ್ಲಿ ಅಸ್ತಿತ್ವ ಕಳೆದುಕೊಂಡಿರುವ ಎಎಪಿಗೆ ಈ ಗೆಲುವು ಅಳಿವು ಉಳಿವಿನ ಪ್ರಶ್ನೆಯಾಗಿತ್ತು.