ಬೆಂಗಳೂರು: ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿ ವಿವಾದ ಸೃಷ್ಟಿಸಿದ್ದ ಅಮೂಲ್ಯ ಲಿಯೋನ್ , ತಾನು ಪಾಕಿಸ್ತಾನ ಜಿಂದಾಬಾದ್ ಅನ್ನುವ ಜೊತೆಗೆ, ಹಿಂದೂಸ್ತಾನ್ ಜಿಂದಾಬಾದ್ ಎಂದು ಕೂಡ ಮೂರು ಬಾರಿ ಘೋಷಣೆ ಕೂಗಿದ್ದೆ. ಆದರೆ, ತನ್ನನ್ನು ತಪ್ಪಾಗಿ ತಿಳಿದುಕೊಳ್ಳಲಾಗಿದೆ ಎಂದು ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾಳೆ.
ಗುರುವಾರ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ವಿರೋಧಿಸಿ “ಹಿಂದೂ-ಮುಸ್ಲಿಂ-ಸಿಖ್-ಇಸಾಯಿ ಫೆಡರೇಷನ್ ಬೆಂಗಳೂರು’ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಆಯೋಜಿಸಿದ್ದ ಪ್ರತಿಭಟನೆ ವೇಳೆ ಅಮೂಲ್ಯ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಳು.ನಂತರ ಪೊಲೀಸರು ಆಕೆಯನ್ನು ಬಂಧಿಸಿದ್ದರು.
ತಾವು ಈ ಹಿಂದಿನಿಂದಲೂ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹೋರಾಟ ನಡೆಸುತ್ತಿದ್ದು,
ತಾವು ಯಾವುದೇ ದೇಶದ ಪರವಾಗಿಲ್ಲ. ಬದಲಿಗೆ ಪ್ರಜೆಗಳ ಪರವಾಗಿದ್ದೇನೆ ಎಂದು ಆಕೆ ಸ್ಪಷ್ಟೀಕರಣ ನೀಡಿದ್ದಾಳೆ.