Friday, September 30, 2022

ಪ್ರಿಯಾಂಕ್ ಖರ್ಗೆ ಲಂಚ, ಮಂಚ ಹೇಳಿಕೆಗೆ ಆಕ್ರೋಶ; ಬಿಜೆಪಿ ಕಿಡಿಕಿಡಿ, ಮಹಿಳೆಯರು ಸಿಡಿಮಿಡಿ

Follow Us

newsics.com

ಬೆಂಗಳೂರು: ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಅವರು ಮಹಿಳೆಯರ ಕುರಿತು ಕೀಳು ಅಭಿರುಚಿಯ ಹೇಳಿಕೆ ನೀಡಿದ್ದು ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದೆ.

ಕರ್ನಾಟಕದಲ್ಲಿ ಯುವತಿಯರಿಗೆ ನೌಕರಿ ಬೇಕಾದ್ರೆ ಮಂಚ ಹತ್ತಬೇಕು, ಯುವಕರು ಲಂಚ ಕೊಡಬೇಕು. ಈ ಸರ್ಕಾರದಲ್ಲಿ ಪ್ರತಿ ಹುದ್ದೆ ಮಾರಾಟಕ್ಕಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದರು. ಖರ್ಗೆ ಹೇಳಿಕೆಯಿಂದ ಬಿಜೆಪಿ ಸಿಡಿಮಿಡಿಗೊಂಡಿದೆ. ಮಹಿಳೆಯರೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

#ಮಹಿಳಾವಿರೋಧಿಕಾಂಗ್ರೆಸ್ ಹ್ಯಾಶ್ ಟ್ಯಾಗ್ ಬಳಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಲಂಚ-ಮಂಚದ ಸರ್ಕಾರ ಎಂದು ಆರೋಪ ಮಾಡಿದ್ದ ಮಾಜಿ ಸಚಿವ ಪ್ರಿಯಾಂಕ್ ಖರ್ಗೆಯವರಿಗೆ ತಮ್ಮ ಮನೆಯ ಹೆಂಚು ತೂತು ಎಂಬುದೇ ಗೊತ್ತಿಲ್ಲ. ಇವರು‌ ಆರೋಪ ಮಾಡಿದ ಬೆನ್ನಲ್ಲೆ ಜಯಮಾಲಾ ಅವರ ಲಂಚದ ಹಗರಣ ಬಯಲಾಗಿದೆ. ಹಾಗಾದರೆ ಲಂಚದ ಸರ್ಕಾರ ಯಾರದ್ದು ಎಂದು ಪ್ರಶ್ನಿಸಿದೆ.

ಕಾಂಗ್ರೆಸ್ ನಾಯಕರ ರಾತ್ರಿ ಬದುಕಿನ ರಂಗ-ಬಿರಂಗಿ ಬಗ್ಗೆ ಸಾಕಷ್ಟು ದಂತಕತೆಗಳು ಮಾತ್ರವಲ್ಲ, ಗುಪ್ತ ಸಿಡಿಗಳೂ ಇವೆ ಎಂದು ಬಿಜೆಪಿ ಕುಟುಕಿದೆ. ಮಹಿಳೆಯರ ಬಗ್ಗೆ ಲಘುವಾಗಿ ಹೇಳಿಕೆ ನೀಡುವುದನ್ನು ನಿಲ್ಲಿಸಿ ಎಂದು ಒತ್ತಾಯಿಸಿರುವ ಕೆಲ‌ ಮಹಿಳಾ ಸಂಘಟನೆಗಳು ಖರ್ಗೆ ಹೇಳಿಕೆಯನ್ನು ಖಂಡಿಸಿವೆ.

ಮೊದಲ ಬಾರಿಗೆ ಮಸೀದಿ ಮೇಲೆ ಹಾರಿದ ರಾಷ್ಟ್ರಧ್ವಜ

ಮತ್ತಷ್ಟು ಸುದ್ದಿಗಳು

vertical

Latest News

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ...

ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಇನ್ನಿಲ್ಲ

newsics.com ಮೈಸೂರು: ಖ್ಯಾತ ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಶುಕ್ರವಾರ ನಿಧನರಾದರು. ವೀಣೆ ಶೇಷಣ್ಣ ಅವರ ವಂಶದಲ್ಲಿ ಜನಿಸಿದ್ದ ಮೈಸೂರು ವಿ. ಸುಬ್ರಹ್ಮಣ್ಯ ಅವರು ಸಹಜವಾಗಿಯೇ ಸಂಗೀತಾಸಕ್ತಿ ಹೊಂದಿದ್ದರು. ಮೈಸೂರು ವಿ. ಸುಬ್ರಹ್ಮಣ್ಯ ಅವರ...

ಬೆಕ್ಕು ಕಚ್ಚಿದೆ ಎಂದು ಚಿಕಿತ್ಸೆಗೆ ಹೋದ್ರೆ ಬೀದಿ ನಾಯಿಯೂ ಕಚ್ಚಿತು!

newsics.com ಕೇರಳ: ಬೆಕ್ಕು ಕಚ್ಚಿದ್ದರಿಂದ ಆ್ಯಂಟಿ ರೇಬಿಸ್ ಲಸಿಕೆ ಹಾಕಿಸಿಕೊಳ್ಳಲು ಹೋಗಿದ್ದ ಮಹಿಳೆಯೊಬ್ಬರಿಗೆ ಆರೋಗ್ಯ ಕೇಂದ್ರದಲ್ಲೇ ಬೀದಿ ನಾಯಿಯೊಂದು ಕಚ್ಚಿದೆ. ಕೇರಳದ ತಿರುವನಂತಪುರಂನಲ್ಲಿ ಈ ಘಟನೆ ನಡೆದಿದೆ. ವಿಜಿಂಜಂ ಸಮುದಾಯ ಆರೋಗ್ಯ ಕೇಂದ್ರಕ್ಕೆ ಗುರುವಾರ ಬೆಳಗ್ಗೆ...
- Advertisement -
error: Content is protected !!