Saturday, June 10, 2023

ಬಿಪಿಎಲ್ ಕಾರ್ಡ್: ಜೂ.1 ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ

Follow Us

newsics.com

ಬೆಂಗಳೂರು: ಆದ್ಯತಾ ಕುಟುಂಬಗಳ (ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್) ಪಡಿತರ ಚೀಟಿ ಕೋರಿ ಅರ್ಜಿ ಸಲ್ಲಿಸಲು ಜೂನ್ 1 ರಿಂದ ಅವಕಾಶ ಕಲ್ಪಿಸಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ತೀರ್ಮಾನಿಸಿದೆ.

ಚುನಾವಣಾ ನೀತಿ ಸಂಹಿತೆ ಕಾರಣದಿಂದ ರಾಜ್ಯದಲ್ಲಿ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಕೆ ಮತ್ತು ಪಡಿತರ ಚೀಟಿಗಳ ವಿತರಣೆ ಸ್ಥಗಿತಗೊಳಿಸಲಾಗಿತ್ತು. ವೆಬ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಕೆ ವಿಭಾಗವನ್ನು ಲಾಕ್ ಮಾಡಲಾಗಿತ್ತು.

ಕಾಂಗ್ರೆಸ್ ಪಕ್ಷವು ಚುನಾವಣೆಯಲ್ಲಿ ನೀಡಿರುವ ಐದು ಗ್ಯಾರಂಟಿ ಭರವಸೆಗಳ ಅನುಷ್ಠಾನದಲ್ಲಿ ಫಲಾನುಭವಿಗಳನ್ನು ಗುರುತಿಸಲು ಬಿಪಿಎಲ್ ಪಡಿತರ ಚೀಟಿಯನ್ನೇ ಮಾನದಂಡವಾಗಿ ನಿಗದಿಪಡಿಸುವ ಸಾಧ್ಯತೆ ಇದೆ. ಈ ಕಾರಣಕ್ಕಾಗಿ ಜನರು ಬಿಪಿಎಲ್ ಪಡಿತರ ಚೀಟಿಗಾಗಿ ಆಹಾರ ಇಲಾಖೆ ಕಚೇರಿಗಳಿಗೆ ಭೇಟಿ ನೀಡುತ್ತಿದ್ದಾರೆ.

ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಹೆಚ್ಚುವರಿ ನಿರ್ದೇಶಕ ಜಿ. ಗ್ಯಾನೇಂದ್ರ ಕುಮಾರ್ ಗಂಗ್ವಾರ್, ‘ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ಪಡಿತರ ಚೀಟಿಗಳಿಗೆ ಅರ್ಜಿ ಸ್ವೀಕರಿಸುವುದನ್ನು ನಿಲ್ಲಿಸಲಾಗಿತ್ತು. ಈ ಹಿಂದೆಯೇ ಮಂಜೂರಾದ ಪಡಿತರ ಚೀಟಿಗಳ ವಿತರಣೆ ಪ್ರಗತಿಯಲ್ಲಿದೆ. ಆದ್ದರಿಂದ ಜೂನ್ 1ರಿಂದ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸ್ವೀಕರಿಸಲಾಗುವುದು’ ಎಂದಿದ್ದಾರೆ.

ಬಿಜೆಪಿ ತೊರೆದು ಬಂದ ಸವದಿ- ಶೆಟ್ಟರ್ ಗೆ ಕೈ ಕೊಟ್ಟ ಕಾಂಗ್ರೆಸ್: ಸಚಿವ ಸ್ಥಾನ ಮಿಸ್

ಇಷ್ಟು ದಿನ ಹೊಸ ಸಂಸತ್ ಭವನವಾಯ್ತು, ಈಗ ‘ಸೆಂಗೋಲ್’ ಮೇಲೆ ಕೆಸರೆರಚಾಟ: ಯಾಕಿಷ್ಟು ರಾಜಕೀಯ?

ಮತ್ತಷ್ಟು ಸುದ್ದಿಗಳು

vertical

Latest News

‘ಶಕ್ತಿ’ ಯೋಜನೆಗೆ ನಾಳೆ ಚಾಲನೆ: ನಿರ್ಮಲಾ ಸೀತಾರಾಮನ್‌ಗೆ ಆಹ್ವಾನ

Newsics ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ನಾಳೆ ಚಾಲನೆ ದೊರಕಲಿದೆ.

ಬ್ರಿಟನ್: ಸಂಸದ ಸ್ಥಾನಕ್ಕೆ ಬೋರಿಸ್ ಜಾನ್ಸನ್ ರಾಜೀನಾಮೆ!

Newsics.com ಲಂಡನ್: ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಇದೀಗ ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ...

ಗಡಿಯಲ್ಲಿ ಪಾಕ್ ನಿಗೂಢ ಬಲೂನ್ ಪತ್ತೆ: ಸೇನೆಯಿಂದ ಶೋಧ ಕಾರ್ಯ

Newsics.com ಶ್ರೀನಗರ: ಪಾಕಿಸ್ತಾನದ ಅಂತರಾಷ್ಟ್ರೀಯ ಏರ್‌ಲೈನ್ಸ್ ಲಾಂಛನ ಇರುವ ವಿಮಾನದ ಆಕಾರದ ಅನುಮಾನಾಸ್ಪದ ಬಲೂನ್ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಶನಿವಾರ ಪತ್ತೆಯಾಗಿದೆ.
- Advertisement -
error: Content is protected !!