newsicsc.com
ನವದೆಹಲಿ: ಕರ್ನಾಟಕದಲ್ಲಿ ಬಹುಮತ ಗಳಿಸಿ ಸರ್ಕಾರ ರಚಿಸಿದ ಉತ್ಸಾಹದಲ್ಲಿರುವ ಕಾಂಗ್ರೆಸ್ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸಗಢದಲ್ಲಿ ಚುನಾವಣೆ ಎದುರಿಸುವ ಸಂಬಂಧ ಕಾರ್ಯತಂತ್ರ ರೂಪಿಸಲು ಶುಕ್ರವಾರದಿಂದ ಎರಡು ದಿನಗಳ ಕಾಲ ಚರ್ಚೆ ನಡೆಯಲಿದೆ.
ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಮೇ 26ರಂದು ಚುನಾವಣೆ ಸಂಬಂಧ ಪ್ರತ್ಯೇಕವಾಗಿ ಸಭೆ ನಡೆಯಲಿವೆ. ಮೇ 27ರಂದು ಛತ್ತೀಸಗಢದಲ್ಲಿ ಸಭೆ ನಡೆಯಲಿದೆ. ಎಂದು ಮೂಲಗಳು ತಿಳಿಸಿವೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಈ ಮೂರು ರಾಜ್ಯಗಳಲ್ಲಿ ಚುನಾವಣೆಗೆ ಸಿದ್ಧತೆ ನಡೆದಿದೆ. ಚುನಾವಣಾ ಕಾರ್ಯತಂತ್ರ ನಿಪುಣ ಸುನೀಲ್ ಕನುಗೋಳು ಆಯಾ ರಾಜ್ಯದ ನಾಯಕರೊಂದಿಗೆ ಪಕ್ಷದ ಕಾರ್ಯತಂತ್ರ ಕುರಿತು ಸಭೆಯಲ್ಲಿ ಚರ್ಚಿಸಲಿದ್ದಾರೆ.
ಪ್ರಸ್ತುತ ರಾಜಸ್ಥಾನ ಮತ್ತು ಛತ್ತೀಸಗಢದಲ್ಲಿ ಕಾಂಗ್ರೆಸ್ ಸರ್ಕಾರವಿದೆ. ಕರ್ನಾಟಕದಲ್ಲಿ ರೂಪಿಸಿದ ಕಾರ್ಯತಂತ್ರವನ್ನೇ ಇಲ್ಲಿಯೂ ಪ್ರಯೋಗಿಸಲು ಚಿಂತನೆ ನಡೆದಿದೆ. ಜ್ಯೋತಿರಾಧಿತ್ಯ ಸಿಂಧಿಯಾ ಸೇರಿದಂತೆ ಕೆಲವು ಶಾಸಕರು ಬಿಜೆಪಿಗೆ ನಿಷ್ಠೆ ತೋರಿದ್ದರಿಂದ ಮಧ್ಯಪ್ರದೇಶದಲ್ಲಿ ಕಳೆದುಕೊಂಡಿರುವ ಅಧಿಕಾರವನ್ನು ಮರಳಿ ಪಡೆಯಲು ಕಾಂಗ್ರೆಸ್ ನಿರ್ಧರಿಸಿದೆ.