ಬೆಂಗಳೂರು: ಮಾರಕ ಕೊರೋನಾ ರಾಜ್ಯದಲ್ಲಿ ಮತ್ತೊಬ್ಬ ಎಎಸ್ಐ ಯನ್ನು ಬಲಿಪಡೆದುಕೊಂಡಿದೆ. ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಎಎಸ್ಐಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದವರು ಇದೀಗ ಕೊರೋನಾ ಸೋಂಕಿಗೆ ಪ್ರಾಣ ಕಳೆದುಕೊಂಡಿದ್ದಾರೆ.
ಜುಲೈ 7ರಂದು ಎಎಸ್ಐ ಅವರಲ್ಲಿ ಕೊರೋನಾ ಸೋಂಕಿನ ಲಕ್ಷಣ ಕಂಡು ಬಂದಿತ್ತು. ಬಳಿಕ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಅವರನ್ನು ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಈ ಮಧ್ಯೆ ಬೆಂಗಳೂರಿನಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಚರ್ಚೆ ನಡೆಸಿದ್ದಾರೆ. ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್. ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿದರು. ಲಾಕ್ ಡೌನ್ ಕಟ್ಟು ನಿಟ್ಟಾಗಿ ಜಾರಿ ಮಾಡಲು ಅಧಿಕಾರಿಗಳಿಗೆ ಸಚಿವ ಬೊಮ್ಮಾಯಿ ಇದೇ ಸಂದರ್ಭದಲ್ಲಿ ಸೂಚನೆ ನೀಡಿದರು