Monday, October 2, 2023

ಚಂಡಮಾರುತ: ಕರ್ನಾಟಕ ಸೇರಿ 3 ರಾಜ್ಯಗಳಿಗೆ ಅಲರ್ಟ್

Follow Us

Newsics.com

ನವದೆಹಲಿ: ಅರಬ್ಬೀ ಸಮುದ್ರದ ಕರಾವಳಿ ಭಾಗದಲ್ಲಿ ಭಾರೀ ಆತಂಕ ಮೂಡಿಸಿರುವ ಬಿಪರ್ಜೋಯ್ ಚಂಡಮಾರುತ ಮುಂದಿನ 24 ಗಂಟೆಗಳಲ್ಲಿ ಇನ್ನಷ್ಟು ತೀವ್ರಗೊಳ್ಳಲಿದ್ದು ಉತ್ತರ ಈಶಾನ್ಯದೆಡೆಗೆ ಚಲಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶನಿವಾರ ತಿಳಿಸಿದೆ.

ಪ್ರಸ್ತುತ ಚಂಡಮಾರುತ ಗೋವಾದಿಂದ ಪಶ್ಚಿಮಕ್ಕೆ 690 ಕಿ.ಮೀ, ಮುಂಬೈನ ಪಶ್ಚಿಮ-ನೈಋತ್ಯಕ್ಕೆ 640 ಕಿ.ಮೀ ಹಾಗೂ ಪೋರಬಂದರ್‌ನಿಂದ ನೈಋತ್ಯಕ್ಕೆ 640 ಕಿ.ಮೀ ದೂರದಲ್ಲಿ ಇದ್ದು, ಗಂಟೆಗೆ 145 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಚಂಡಮಾರುತ ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರದ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆ ಹಾಗೂ ಬಲವಾದ ಗಾಳಿಯನ್ನು ಉಂಟುಮಾಡುತ್ತದೆ ಎಂದು ಐಎಂಡಿ ಎಚ್ಚರಿಕೆ ನೀಡಿದೆ.

ಶನಿವಾರ ಹಾಗೂ ಭಾನುವಾರ ಬಿಪರ್ಜೋಯ್ ಚಂಡಮಾರುತದ ಅಬ್ಬರ ಜೋರಾಗಲಿದೆ. ಗುಜರಾತ್, ಮಹಾರಾಷ್ಟ್ರದ ಕರಾವಳಿಯಲ್ಲಿ ಉಬ್ಬರದ ಭೀತಿಯಿದೆ. ರಾಜ್ಯ ಕರಾವಳಿ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಮಹಾರಾಷ್ಟ್ರ ಹಾಗೂ ಗುಜರಾತ್ ಕರಾವಳಿ ಭಾಗಗಳಲ್ಲಿ ಹೆಚ್ಚಿನ ಪ್ರಭಾವ ಸಾಧ್ಯತೆಯಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಮತ್ತೆ ಚಿನ್ನ, ಬೆಳ್ಳಿ ತುಸು ದುಬಾರಿ

ಮತ್ತಷ್ಟು ಸುದ್ದಿಗಳು

vertical

Latest News

ಮೊಸಳೆಯೊಂದಿಗೆ ಬೇಸ್ ಬಾಲ್ ಮ್ಯಾಚ್ ನೋಡಲು ಬಂದ ಪ್ರಾಣಿ ಪ್ರೇಮಿ!

newsics.com ಅಮೆರಿಕ: ಮನೆಯಲ್ಲಿ ಸಾಕಿದ್ದ ಮೊಸಳೆಯೊಂದಿಗೆ ಬೇಸ್‌ಬಾಲ್ ಮ್ಯಾಚ್‌ ನೋಡಲು ಸ್ಟೇಡಿಯಂ ಬಂದ ಪ್ರಾಣಿ ಪ್ರೇಮಿಯೊಬ್ಬನನ್ನು ಕಂಡು ಭದ್ರತಾ ಸಿಬ್ಬಂದಿ ದಂಗಾಗಿ ಪ್ರವೇಶ ನಿರಾಕರಿಸಿರುವ ಪ್ರಸಂಗ ಅಮೆರಿಕಾದ...

ಜಿಪಿಎಸ್ ಮ್ಯಾಪ್ ಎಡವಟ್ಟು: ಕಾರು ನದಿಯಲ್ಲಿ ಮುಳುಗಿ ಇಬ್ಬರು ವೈದ್ಯರ ಸಾವು

newsics.com ತಿರುವನಂತಪುರಂ: ಜಿಪಿಎಸ್ ಮ್ಯಾಪ್ ತೋರಿಸಿದ ದಾರಿಯಲ್ಲಿ ಹೋದ ಕಾರೊಂದು ನದಿಯಲ್ಲಿ ಮುಳುಗಿ ಇಬ್ಬರು ವೈದ್ಯರು ಮೃತಪಟ್ಟ ಘಟನೆ ಕೇರಳದ ಎರ್ನಾಕುಲಂನಲ್ಲಿ ನಡೆದಿದೆ. ತಡರಾತ್ರಿ ಭಾರಿ ಮಳೆಯ ಕಾರಣ ಅವಘಡ ಸಂಭವಿಸಿದೆ. ಮೃತರನ್ನು ಡಾ.ಅದ್ವೈತ್ (29)...

ವರದಿಗಾರ್ತಿ ಮೇಲೆ ರೇಗಿದ ಅಣ್ಣಾಮಲೈ: ಖಂಡನೆ

newsics.com ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಮಹಿಳಾ ವರದಿಗಾರರೊಬ್ಬರ ಮೇಲೆ ಸಿಟ್ಟಾಗುವ ಮೂಲಕ ಟೀಕೆಗೆ ಗುರಿಯಾಗಿದ್ದಾರೆ. ವರದಿಗಾರ್ತಿ ಜೊತೆ ಅಣ್ಣಾಮಲೈ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ...
- Advertisement -
error: Content is protected !!