Wednesday, October 5, 2022

ಹಿಂದಿ ಚಿತ್ರರಂಗದ ಮಾನಹಾನಿಕರ ವರದಿ ಪ್ರಸಾರಮಾಡಬೇಡಿ: ದೆಹಲಿ ಹೈಕೋರ್ಟ್ ಆದೇಶ

Follow Us

Newsics.com

ನವದೆಹಲಿ:  ಸುದ್ದಿವಾಹಿನಿಗಳು ಹಿಂದಿ ಚಿತ್ರರಂಗದ ಕುರಿತು ಮಾನಹಾನಿಕರ ವರದಿ ಪ್ರಸಾರ ಮಾಡಬಾರದು ಎಂದು ದೆಹಲಿ ಹೈಕೋರ್ಟ್ ಆದೇಶ ನೀಡಿದೆ  ನಟ ಸುಶಾಂತ್ ಸಿಂಗ್ ರಜಪೂತ್ ಅವರ ನಿಗೂಢ ಸಾವಿನ ಬಳಿಕ ಸುದ್ದಿ ವಾಹಿನಿಗಳಲ್ಲಿ ಮಾಧ್ಯಮ ವಿಚಾರಣೆ ನಡೆಯುತ್ತಿದೆ. ಹಿಂದಿ ಚಿತ್ರರಂಗವನ್ನು ಕೆಟ್ಟದ್ದಾಗಿ ಬಿಂಬಿಸಲಾಗುತ್ತಿದೆ ಎಂದು ಆರೋಪಿಸಿ ದೆಹಲಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು.

ಟೈಮ್ಸ್ ನೌ ಮತ್ತು ರಿಪಬ್ಲಿಕ್ ಸುದ್ದಿ ವಾಹಿನಿಯ ಕಾರ್ಯ ವೈಖರಿಯನ್ನು ಅರ್ಜಿ ದಾರರರು ಮುಖ್ಯವಾಗಿ ಪ್ರಶ್ನಿಸಿದ್ದರು. ಈ ಎರಡೂ ಸುದ್ದಿವಾಹಿನಿಗಳ  ಮುಖ್ಯ ಸಂಪಾದಕರನ್ನು  ಪ್ರತಿವಾದಿಗಳೆಂದು ಹೆಸರಿಸಲಾಗಿತ್ತು.

ಇದೀಗ ತೀರ್ಪು ನೀಡಿರುವ ದೆಹಲಿ ಹೈಕೋರ್ಟ್  ಸಾಮಾಜಿಕ ಜಾಲತಾಣ ಸೇರಿದಂತೆ ಯಾವುದೇ ರೂಪದಲ್ಲಿ  ಮಾನ ಹಾನಿಕರ ವರದಿ ಪ್ರಸಾರ ಮಾಡಬಾರದು ಎಂದು ಸುದ್ದಿ ವಾಹಿನಿಗಳಿಗೆ ಆದೇಶ ನೀಡಿದೆ.

ಸುಶಾಂತ್ ಸಿಂಗ್ ರಜಪೂತ್ ಅವರ ನಿಗೂಢ ಸಾವಿನ ಹಿನ್ನೆಲೆಯಲ್ಲಿ ದೇಶದ  ಪ್ರಮುಖ ಸುದ್ದಿ ವಾಹಿನಿಗಳು  ಪ್ರೈಂ ಟೈಮ್ ನಲ್ಲಿ ಇದರ ಬಗ್ಗೆ ಗಂಟೆಗಟ್ಟಲೆ  ಚರ್ಚೆ ನಡೆಸಿದ್ದವು.

ಮತ್ತಷ್ಟು ಸುದ್ದಿಗಳು

vertical

Latest News

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ...

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು. ದಿನೇಶ್ ಕಾರ್ತಿಕ್ 46 ರನ್​ ಹಾಗೂ...

ದೇಶದ ಶೇ.90ಕ್ಕಿಂತ ಹೆಚ್ಚು ಸ್ಟಾರ್ಟ್‌ಅಪ್‌ಗಳು ವಿಫಲ: ಬಿಲಿಯನೇರ್ ಆನಂದ್ ಮಹೀಂದ್ರ

newsics.com ನವದೆಹಲಿ: ದೇಶದ ಶೇ.90ರಷ್ಟು ಸ್ಟಾರ್ಟ್‌ಅಪ್‌ಗಳು ವಿಫಲವಾಗಿವೆ ಎಂದು ಬಿಲಿಯನೇರ್ ಆನಂದ್ ಮಹೀಂದ್ರ ಹೇಳಿದ್ದಾರೆ. ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವೀಟ್ ಮಾಡಿ, ಎಲ್ಲಾ ಸ್ಟಾರ್ಟ್‌ಅಪ್‌ಗಳಲ್ಲಿ 90% ಕ್ಕಿಂತ ಹೆಚ್ಚು ವಿಫಲವಾಗಿವೆ. ಒಂದು-ಆಫ್ ಸನ್ನಿವೇಶಗಳಿಂದಾಗಿ...
- Advertisement -
error: Content is protected !!