Saturday, June 10, 2023

ಧಾರವಾಡದಲ್ಲಿ ತಡರಾತ್ರಿ ಡಬಲ್ ಮರ್ಡರ್

Follow Us

newsics.com

ಧಾರವಾಡ: ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಧಾರವಾಡದಲ್ಲಿ ತಡರಾತ್ರಿ ನಡೆದಿದೆ.

ರಿಯಲ್ ಎಸ್ಟೇಟ್ ಉದ್ಯಮಿ ಮಹಮ್ಮದ್ ಕುಡಚಿ ಹಾಗೂ ಮತ್ತೊರ್ವ ವ್ಯಕ್ತಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ. ನಗರದ ಕಮಲಾಪುರ ಹೊರವಲಯದ ಮನೆ ಎದುರು ಮಹಮ್ಮದ್ ಕುಳಿತಿದ್ದಾಗ ದುಷ್ಕರ್ಮಿಗಳ ಗುಂಪು ಅವರ ಮೇಲೆ ದಾಳಿ ನಡೆಸಿದೆ. ಈ ವೇಳೆ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಹಮ್ಮದ್ ಅವರ ಅವರ ಮನೆಯಲ್ಲಿದ್ದ ಮತ್ತೋರ್ವನ ಮೇಲೂ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ದಾಳಿಯಿಂದ ತಪ್ಪಿಸಿಕೊಳ್ಳಲು ಆತ ಓಡಿ ಹೋಗಿದ್ದು, ಮನೆಯಿಂದ ರಸ್ತೆಯುದ್ದಕ್ಕೂ ರಕ್ತ ಚೆಲ್ಲಾಡಿದೆ. ಆತ ಕೂಡ ಸ್ವಲ್ಪ ದೂರದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಆತನ ಹೆಸರು ತಿಳಿದು ಬಂದಿಲ್ಲ.

ಸ್ಥಳಕ್ಕೆ ಪೊಲೀಸ್ ಆಯುಕ್ತ ರಮಣ್ ಗುಪ್ತಾ ಸೇರಿದಂತೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೋಡಿ ಕೊಲೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು. ಈ ಹತ್ಯೆ ಹಿಂದಿನ ಕಾರಣ ಏನು ಎಂಬುದನ್ನು ಬಹಿರಂಗಪಡಿಸಲಾಗುವುದು ಎಂದು ಗುಪ್ತಾ ಅವರು ತಿಳಿಸಿದ್ದಾರೆ.

ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ

ಮತ್ತಷ್ಟು ಸುದ್ದಿಗಳು

vertical

Latest News

‘ಶಕ್ತಿ’ ಯೋಜನೆಗೆ ನಾಳೆ ಚಾಲನೆ: ನಿರ್ಮಲಾ ಸೀತಾರಾಮನ್‌ಗೆ ಆಹ್ವಾನ

Newsics ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ನಾಳೆ ಚಾಲನೆ ದೊರಕಲಿದೆ.

ಬ್ರಿಟನ್: ಸಂಸದ ಸ್ಥಾನಕ್ಕೆ ಬೋರಿಸ್ ಜಾನ್ಸನ್ ರಾಜೀನಾಮೆ!

Newsics.com ಲಂಡನ್: ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಇದೀಗ ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ...

ಗಡಿಯಲ್ಲಿ ಪಾಕ್ ನಿಗೂಢ ಬಲೂನ್ ಪತ್ತೆ: ಸೇನೆಯಿಂದ ಶೋಧ ಕಾರ್ಯ

Newsics.com ಶ್ರೀನಗರ: ಪಾಕಿಸ್ತಾನದ ಅಂತರಾಷ್ಟ್ರೀಯ ಏರ್‌ಲೈನ್ಸ್ ಲಾಂಛನ ಇರುವ ವಿಮಾನದ ಆಕಾರದ ಅನುಮಾನಾಸ್ಪದ ಬಲೂನ್ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಶನಿವಾರ ಪತ್ತೆಯಾಗಿದೆ.
- Advertisement -
error: Content is protected !!