ಕೇರಳ: ದೇಶವನ್ನೆ ಬೆಚ್ಚಿ ಬೀಳಿಸಿದ್ದ ಕೇರಳದ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಇತ್ತೀಚಿಗಷ್ಟೇ ಸಿಪಿಐಎಂ ನಾಯಕನ ಪುತ್ರನಿಗೆ ನೊಟೀಸ್ ನೀಡಿದ್ದ ಇಡಿ ಇದೀಗ ಲೈಫ್ ಮಿಶನ್ ಸಿಇಓಗೆ ತನಿಖೆಗೆ ಹಾಜರಾಗುವಂತೆ ಸೂಚಿಸಿದೆ.
ಲೈಫ್ ಮಿಶನ್ ಸಿಇಓ ಯು.ವಿ.ಜೋಸೆ ಜಾರಿ ನಿರ್ದೇಶನಾಲಯದ ಎದುರು ಹಾಜರಾಗಲಿದ್ದು, ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಲಿದ್ದಾರೆ. ಇಡಿ ತನಿಖೆ ಚುರುಕುಗೊಳಿಸಿದ್ದು, ಹಲವರನ್ನು ವಿಚಾರಣೆಗೆ ಕರೆಯುವ ಸಿದ್ಧತೆ ನಡೆಸಿದೆ. ಈ ಮಧ್ಯೆ ನಿನ್ನೆಯಷ್ಟೇ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಎದೆನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಚುರುಕುಗೊಂಡ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದ ತನಿಖೆ
Follow Us