Saturday, June 10, 2023

ಕನ್ನಡದ ಖ್ಯಾತ ವಿಮರ್ಶಕ ಜಿ.ಎಚ್. ನಾಯಕ ನಿಧನ

Follow Us

newsics.com

ಮೈಸೂರು: ಖ್ಯಾತ ವಿಮರ್ಶಕ ಜಿ.ಎಚ್.ನಾಯಕ (88 ವರ್ಷ ವಯಸ್ಸು) ಶುಕ್ರವಾರ ಮೈಸೂರಿನಲ್ಲಿ ಹೃದಯಾಘಾತದಿಂದ ನಿಧನರಾದರು.

ಅವರಿಗೆ ಪತ್ನಿ ಮೀರಾ ನಾಯಕ, ಪುತ್ರಿ ಕೀರ್ತಿ ಹಾಗೂ ಮೊಮ್ಮಗಳು ಇದ್ದಾರೆ. ಜಿ.ಎಚ್.ನಾಯಕ ಎಂದು ಕನ್ನಡ ಸಾಹಿತ್ಯ ಲೋಕದಲ್ಲಿ ಚಿರಪರಿಚಿತರಾಗಿದ್ದ ಅವರ ಪೂರ್ಣ ಹೆಸರು ಗೋವಿಂದರಾಯ ಹಮ್ಮಣ್ಣ ನಾಯಕ.

1935ರ ಸೆ.18ರಂದು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಸೂರ್ವೆ ಗ್ರಾಮದಲ್ಲಿ ಜನಿಸಿದರು. ಮೈಸೂರು ವಿಶ್ವವಿದ್ಯಾಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಮುಂದೆ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿದ್ದ ಅವರು ಮೈಸೂರಿನಲ್ಲಿ ನೆಲೆಸಿದ್ದರು.

ಕೃತಿಗಳು

ಸಮಕಾಲೀನ (೧೯೭೩)
ಅನಿವಾರ್ಯ (೧೯೮೦)
ನಿರಪೇಕ್ಷೆ (೧೯೮೪)
ನಿಜದನಿ (೧೯೮೮)
ವಿನಯ ವಿಮರ್ಶೆ (೧೯೯೧)
ಸಕಾಲಿಕ (೧೯೯೫)
ಗುಣ ಗೌರವ (೨೦೦೨)
ಹರಿಶ್ಚಂದ್ರ ಕಾವ್ಯ ಓದು-ವಿಮರ್ಶೆ (೨೦೦೨)
ಕೃತಿ ಸಾಕ್ಷಿ (೨೦೦೬)
ಸ್ಥಿತಿ ಪ್ರಜ್ಞೆ (೨೦೦೭)
ಮತ್ತೆ ಮತ್ತೆ ಪಂಪ (೨೦೦೮)
ಸಾಹಿತ್ಯ ಸಮೀಕ್ಷೆ (೨೦೦೯)
ಉತ್ತರಾರ್ಧ (೨೦೧೧)

ಪ್ರಶಸ್ತಿಗಳು

ಉತ್ತರಾರ್ಧ ಕೃತಿಗೆ 2014 ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ,

ನಿರಪೇಕ್ಷ ವಿಮರ್ಶಾ ಕೃತಿಗೆ ‘ಕರ್ನಾಟಕ ಸಾಹಿತ್ಯ ಅಕಾಡೆಮಿ’ಯ ಪ್ರಶಸ್ತಿ,

ನಿಜದನಿ ವಿಮರ್ಶಾ ಕೃತಿಗೆ ‘ವಿ.ಎಂ.ಇನಾಂದಾರ ಸ್ಮಾರಕ ಬಹುಮಾನ’ ಲಭಿಸಿವೆ.

ಪಂಪ ಪ್ರಶಸ್ತಿ ಪುರಸ್ಕೃತರೂ ಆಗಿದ್ದರು.

ವಯೋಸಹಜ ಕಾರಣಗಳಿಂದ ಅವರು ಇತ್ತೀಚೆಗೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿರಲಿಲ್ಲ.

ಕುಮಾರಧಾರ ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ

ಮತ್ತಷ್ಟು ಸುದ್ದಿಗಳು

vertical

Latest News

ಬ್ರಿಟನ್: ಸಂಸದ ಸ್ಥಾನಕ್ಕೆ ಬೋರಿಸ್ ಜಾನ್ಸನ್ ರಾಜೀನಾಮೆ!

Newsics.com ಲಂಡನ್: ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಇದೀಗ ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ.

ಗಡಿಯಲ್ಲಿ ಪಾಕ್ ನಿಗೂಢ ಬಲೂನ್ ಪತ್ತೆ: ಸೇನೆಯಿಂದ ಶೋಧ ಕಾರ್ಯ

Newsics.com ಶ್ರೀನಗರ: ಪಾಕಿಸ್ತಾನದ ಅಂತರಾಷ್ಟ್ರೀಯ ಏರ್‌ಲೈನ್ಸ್ ಲಾಂಛನ ಇರುವ ವಿಮಾನದ ಆಕಾರದ ಅನುಮಾನಾಸ್ಪದ ಬಲೂನ್ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಶನಿವಾರ ಪತ್ತೆಯಾಗಿದೆ.

ಗ್ಯಾರಂಟಿ ಜಾರಿ ಬೆನ್ನಲ್ಲೇ ಮದ್ಯಪ್ರಿಯರಿಗೆ ಶಾಕ್

newsics.com ಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿ ಜಾರಿಗೊಳಿಸಿದ ಬೆನ್ನಲ್ಲೇ ಮದ್ಯದ ಬೆಲೆಯನ್ನು ದುಪ್ಪಟ್ಟು ಮಾಡಿ ಮದ್ಯಪ್ರಿಯರಿಗೆ ಶಾಕ್ ನೀಡಿದೆ. ಕರೆಂಟ್ ಬಿಲ್ ದರ ಏರಿಕೆ ಬಳಿಕ...
- Advertisement -
error: Content is protected !!