ನವದೆಹಲಿ: ದೆಹಲಿಯ ಮುಖ್ಯಮಂತ್ರಿಯಾಗಿ ಅರವಿಂದ ಕೇಜ್ರಿವಾಲ್ ಫೆಬ್ರವರಿ 16 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ದೆಹಲಿಯ ರಾಮ ಲೀಲಾ ಮೈದಾನದಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಲಿದೆ. ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಮಂದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ದೆಹಲಿ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಸ್ಪಷ್ಟ ಬಹುಮತದೊಂದಿಗೆ ಮತ್ತೇ ಅಧಿಕಾರಕ್ಕೆ ಬಂದಿದೆ.