newsics.com
ಉತ್ತರಪ್ರದೇಶ: ಸಾಮೂಹಿಕ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆ ಪೊಲೀಸರ ನಿರ್ಲಕ್ಷ್ಯತೆಯನ್ನು ವಿರೋಧಿಸಿ, ಪೊಲೀಸ್ ಠಾಣೆಯ ಎದುರೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರಪ್ರದೇಶದ ಅಜಮ್ ಗಢದಲ್ಲಿ ನಡೆದಿದೆ.
ಘಟನೆಯ ನಂತರ ತನಿಖೆಯಲ್ಲಿ ನಿರ್ಲಕ್ಷ್ಯ ತೋರಿದ ಪೊಲೀಸ್ ಠಾಣೆಯ ಎಸ್ ಹೆಚ್ ಒ ಅವರನ್ನು ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ಸಿಂಗ್ ಅಮಾನತು ಮಾಡಿದ್ದಾರೆ. ಆರೋಪಿಗಳನ್ನು ಬಂಧಿಸಲು ಮೂರು ತಂಡಗಳನ್ನು ರಚಿಸಲಾಗಿದೆ.
54 ವರ್ಷದ ಮಹಿಳೆ, ದೂರು ದಾಖಲಿಸಲು ಕಳೆದ ಹಲವು ದಿನಗಳಿಂದ ಪ್ರಯತ್ನಿಸುತ್ತಿದ್ದಳು. ಆದರೆ ಪೊಲೀಸರು ಯಾವುದೇ ಕ್ರಮ ಕೈಗೊಳ್ಳಲು ನಿರ್ಲಕ್ಷ್ಯ ತೋರಿದ್ದರು.
ಇದರಿಂದ ಬೇಸರಗೊಂಡ ಸಂತ್ರಸ್ತೆ ವಿಷ ಸೇವಿಸಿದ್ದಾಳೆ. ತಕ್ಷಣ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಮೃತಪಟ್ಟಿದ್ದಾಳೆ.
ವ್ಯಾಕ್ಸಿನ್ ಸರ್ಟಿಫಿಕೇಟ್ ನಲ್ಲಿ ಪ್ರಧಾನಿ ಫೊಟೋ: ಕೇಂದ್ರಕ್ಕೆ ಕೇರಳ ಹೈಕೋರ್ಟ್ ನೋಟಿಸ್