newsics.com
ಬೆಂಗಳೂರು: ಅನಗತ್ಯ ವಾಹನ ತಪಾಸಣೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಬ್ರೇಕ್ ಹಾಕಿದ್ದಾರೆ. ಮದ್ಯಪಾನ ಮಾಡಿ ವಾಹನ ಚಲಾಯಿಸುವವರು ಮತ್ತು ಸಂಚಾರ ನಿಯಮ ಉಲ್ಲಂಘನೆ ಮಾಡುವ ವಾಹನಗಳನ್ನು ಮಾತ್ರ ತಪಾಸಣೆ ಮಾಡಬೇಕು, ಅನಗತ್ಯವಾಗಿ ವಾಹನಗಳನ್ನು ರಸ್ತೆಯಲ್ಲಿ ನಿಲ್ಲಿಸಿ ವಾಹನ ತಪಾಸಣೆ ಮಾಡದಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ರಸ್ತೆಯಲ್ಲಿ ಪೊಲೀಸರು ದಿಢೀರನೇ ವಾಹನ ನಿಲ್ಲಿಸುವುದರಿಂದ ಸಂಚಾರ ದಟ್ಟಣೆ ಹೆಚ್ಚಾಗುತ್ತಿದ್ದು, ಪೊಲೀಸರ ತಪಾಸಣೆಗೆ ಬೆದರಿ ವಾಹನ ಸವಾರರು ತಪ್ಪಿಸಿಕೊಳ್ಳುವ ಯತ್ನದಲ್ಲಿ ಅಪಘಾವಾಗುತ್ತವೆ ಎಂಬ ದೂರುಗಳು ಕೇಳಿಬರುತ್ತಿದ್ದವು. ಇದೀಗ ಪ್ರವೀಣ್ ಸೂದ್ ಈ ಬಗ್ಗೆ ಸ್ಪಷ್ಟಪಡಿಸಿದ್ದಾರೆ.
ಮಹಾರಾಷ್ಟ್ರ ರೆಬೆಲ್ಸ್ಗೆ ಬಿಗ್ ರಿಲೀಫ್ : ಅನರ್ಹತೆ ನೋಟಿಸ್ಗೆ ಉತ್ತರಿಸಲು ಸುಪ್ರೀಂ ಕಾಲಾವಕಾಶ