ನವದೆಹಲಿ: ದೇಶದಲ್ಲಿ ಮಹಿಳೆಯರ ವಿರುದ್ಧ ಹೆಚ್ಚಾಗುತ್ತಿರುವ ಲೈಂಗಿಕ ದೌರ್ಜನ್ಯ ಕುರಿತು ರಾಜ್ಯಸಭೆಯಲ್ಲಿ ಗಂಭೀರ ಕಳವಳ ವ್ಯಕ್ತವಾಯಿತು. ಹೈದರಾಬಾದ್ ನ ಘಟನೆ ಹಿನ್ನೆಲೆಯಲ್ಲಿ ಸದಸ್ಯರು ಪಕ್ಷ ಬೇಧ ಮರೆತು ಕಳವಳ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಯಾ ಬಚ್ಚನ್ ಅತ್ಯಾಚಾರಿಗಳನ್ನು ಬಹಿರಂಗವಾಗಿ ಥಳಿಸಿ ಹತ್ಯೆಮಾಡಬೇಕು ಎಂದು ಬಲವಾಗಿ ಆಗ್ರಹಿಸಿದರು. ಸದನದ ಇತರ ಸದಸ್ಯರು ಇದಕ್ಕೆ ಧ್ವನಿಗೂಡಿಸಿದರು. ದೇಶದಲ್ಲಿ ಮಹಿಳೆಯರ ಸುರಕ್ಷತೆ ಖಾತರಿಪಡಿಸಲು ಸರ್ಕಾರ ಎಲ್ಲ ಕ್ರಮ ಕೈಗೊಳ್ಳಲಿದೆ. ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ರಾಜನಾಥ್ ಸಿಂಗ್ ಇದೇ ಸಂದರ್ಭದಲ್ಲಿ ತಿಳಿಸಿದರು.