ನವದೆಹಲಿ: ಅತ್ಯಾಚಾರ ಕುರಿತಂತೆ ರಾಹುಲ್ ಗಾಂಧಿ ನೀಡಿದ ಹೇಳಿಕೆ ಲೋಕಸಭೆಯಲ್ಲಿ ಕೋಲಾಹಲ ಸೃಷ್ಚಿಸಿದೆ, ಜಾರ್ಖಂಡ್ ನಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಮೇಕ್ ಇನ್ ಇಂಡಿಯಾ ಬದಲಾಗಿ ರೇಪ್ ಇನ್ ಇಂಡಿಯಾ ಆಗುತ್ತಿದೆ ಎಂದು ಹೇಳಿದ್ದರು. ಲೋಕಸಭೆಯಲ್ಲಿ ವಿವಾದಾತ್ಮಕ ಹೇಳಿಕೆ ಪ್ರತಿಧ್ವನಿಸಿತು. ಸಚಿವೆ ಸ್ಮತಿ ಇರಾನಿ ನೇತೃತ್ವದಲ್ಲಿ ಬಿಜೆಪಿ ಮಹಿಳಾ ಸದಸ್ಯರು ರಾಹುಲ್ ಗಾಂಧಿ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.