ನವದೆಹಲಿ: ಅತ್ಯಚಾರ ಪ್ರಕರಣಗಳು ಮತ್ತು ಲೈಂಗಿಕ ಅಪರಾಧದಿಂದ ಮಕ್ಕಳ ರಕ್ಷಣೆ ಕಾಯ್ದೆಗಳಡಿಯ(ಪೋಕ್ಸೋ) ಪ್ರಕರಣಗಳ ಶೀಘ್ರ ವಿಚಾರಣೆ ಹಾಗೂ ಇತ್ಯರ್ಥಕ್ಕೆ 1,023 ತ್ವರಿತ ನ್ಯಾಯಾಲಯ ಸ್ಥಾಪಿಸಲು ಕೇಂದ್ರ ಸರ್ಕಾರ ಮುಂದಾಗಿದೆ.
ಪ್ರಶ್ನಾವಳಿ ವೇಳೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಸ್ಮೃತಿ ಇರಾನಿ ಈ ಕುರಿತು ಲಿಖಿತ ಮಾಹಿತಿ ನೀಡಿದ್ದಾರೆ. ಉತ್ತರಪ್ರದೇಶದಲ್ಲಿ 218 ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಲಾಗುವುದು. ಇವುಗಳಿಗೆ 767.25 ಕೋಟಿ ರೂ. ವೆಚ್ಚವನ್ನು ಅಂದಾಜಿಸಲಾಗಿದ್ದು, ಇದರಲ್ಲಿ 474 ಕೋಟಿ ರೂ. ಕೇಂದ್ರ ಸರ್ಕಾರ ನೆರವು ನೀಡಲಿದೆ ಎಂದು ಅವರು ತಿಳಿಸಿದ್ದಾರೆ.