Saturday, April 17, 2021

ಅಯೋಧ್ಯೆ ಪುನರ್ ಪರಿಶೀಲನಾ ಅರ್ಜಿಗೆ ನಿರ್ಧಾರ

ಅಯೋಧ್ಯೆಯಲ್ಲಿ ರಾಮ ಮಂದಿರ ಕಟ್ಟಲು ಅವಕಾಶ ನೀಡಿರುವ  ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಪುನರ್ ಪರಿಶೀಲನಾ ಅರ್ಜಿ ಸಲ್ಲಿಕೆಗೆ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ನಿರ್ಧರಿಸಿದೆ. ಆದರೆ ಪ್ರಮುಖ ಅರ್ಜಿದಾರರಾಗಿದ್ದ ಸುನ್ನಿ ವಕ್ಫ್ ಬೋರ್ಡ್ ಈ ಪ್ರಕ್ರಿಯೆಯಿಂದ ಹಿಂದೆ ಸರಿದಿದೆ. ಲಖನೌದಲ್ಲಿ ನಡೆದ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಸಭೆಯಲ್ಲಿ ಈ  ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ ಅಯೋಧ್ಯೆ ವಿವಾದ ಕುರಿತಂತೆ ಸುಪ್ರೀಂ ಕೋರ್ಟ್ ತೀರ್ಪಿನ ಕುರಿತು ಗಂಭೀರವಾದ ಚರ್ಚೆ ನಡೆಯಿತು. ಅಂತಿಮವಾಗಿ ಸುಪ್ರೀಂ ತೀರ್ಪಿನ ವಿರುದ್ಧ ಪುನರ್ ಪರಿಶೀಲನಾ  ಅರ್ಜಿ ಸಲ್ಲಿಸುವ  ನಿರ್ಧಾರ ಕೈಗೊಳ್ಳಲಾಯಿತು.

ಮತ್ತಷ್ಟು ಸುದ್ದಿಗಳು

Latest News

ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ  ರಾಜ್ಯದಲ್ಲಿ ಹೊಸದಾಗಿ  17,489  ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ...

ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿ ಹೊರಟ ಯುವತಿಗೆ ದಂಡ

newsics.com ಲಂಡನ್: ಜನರು ಲಾಕ್ ಡೌನ್ ವೇಳೆ ಮನೆಯಲ್ಲಿ ಇರಬೇಕು ಎಂದು ಪೊಲೀಸರು ಸೂಚಿಸುತ್ತಾರೆ. ಆದರೆ ಲಂಡನ್ ನಲ್ಲಿ ಯುವತಿಯೊಬ್ಬಳು ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿಕೊಂಡು ಹೋಗಿದ್ದಳು. ಈ ಸಾಹಸಕ್ಕೆ ಹೋದ ಯುವತಿ...

41 ಅಕ್ರಮ ವಲಸಿಗರ ಜಲ ಸಮಾಧಿ

newsics.com ಟ್ಯುನಿಷಿಯಾ: ಇಟಲಿಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದ 41 ವಲಸಿಗರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಟ್ಯುನಿಷಿಯಾ ಸಮುದ್ರ ತೀರದಲ್ಲಿ ಈ  ದುರಂತ ಸಂಭವಿಸಿದೆ. ಈ ವಲಸಿಗರಿದ್ದ ಹಡಗು ಅಪಘಾತಕ್ಕೀಡಾದ ಪರಿಣಾಮ ವಲಸೆ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ....
- Advertisement -
error: Content is protected !!