ಕೊಚ್ಚಿನ್: ಶಬರಿಮಲೆ ದೇಗುಲದಲ್ಲಿ ಇನ್ನು ಮುಂದೆ ಮೊಬೈಲ್ ಬಳಸುವಂತಿಲ್ಲ.
ಮೊಬೈಲ್ ಬಳಕೆ ನಿಷೇಧಿಸಿ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಡಳಿತ ಮಂಡಳಿ ಘೋಷಣೆ ಮಾಡಿದೆ.
ಈ ಹಿಂದೆಯೇ ಶಬರಿಮಲೆ ಆವರಣದಲ್ಲಿ ಮೊಬೈಲ್ ಬಳಕೆ ಮೇಲೆ ನಿಷೇಧ ಹೇರಲಾಗಿತ್ತಾದರೂ ಅದರ ಪರಿಣಾಮಕಾರಿ ಜಾರಿ ಸಾಧ್ಯವಾಗಿರಲಿಲ್ಲ. ಇದೀಗ ಈ ಬಗ್ಗೆ ನಿರ್ಧಾರ ಕೈಗೊಂಡಿರುವ ತಿರುವಾಂಕೂರು ದೇವಸ್ವಂ ಮಂಡಳಿ ಶಬರಿಮಲೆ ದೇಗುಲದ ಅವರಣದಲ್ಲಿ ಕಟ್ಟುನಿಟ್ಟಾಗಿ ಮೊಬೈಲ್ ಬಳಕೆ ಮೇಲೆ ನಿಷೇಧ ಹೇರಿದೆ.
ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಮೊಬೈಲ್ ಬಳಕೆಗೆ ನಿಷೇಧ
Follow Us