ಶ್ರೀನಗರ: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಡಿಎಸ್ಪಿ ದೇವಿಂದರ್ ಸಿಂಗ್ ಅವರನ್ನು ಅಮಾನತು ಮಾಡಲಾಗಿದೆ.
ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದ ಇಬ್ಬರು ಭಯೋತ್ಪಾದಕರೊಂದಿಗೆ ಷಾಮೀಲಾಗಿದ್ದ ದೇವಿಂದರ್ ಸಿಂಗ್ ಅವರನ್ನು ಶನಿವಾರ ಶೋಪಿಯಾನದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದರು.
ಉಗ್ರರ ಜತೆ ಪ್ರಯಾಣ ಮಾಡಿದ್ದಷ್ಟೇ ಅಲ್ಲ, ಬಾದಾಮಿ ಬಾಗ್ ಕಂಟೋನ್ಮೆಂಟ್ನಲ್ಲಿರುವ ಆರ್ಮಿ XV ಕಾರ್ಪ್ಸ್ ಮುಖ್ಯ ಕಚೇರಿಯ ಬಳಿ ಇರುವ ತಮ್ಮ ನಿವಾಸದಲ್ಲಿ ಮೂವರು ಭಯೋತ್ಪಾದಕರಿಗೆ ಆಶ್ರಯ ನೀಡಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಉಗ್ರರಿಗೆ ಆಶ್ರಯ ನೀಡಿದ್ದ ಡಿಎಸ್ಪಿ ಸಿಂಗ್ ಸಸ್ಪೆಂಡ್
Follow Us