ಉನ್ನಾವೊ; ತಮ್ಮ ಮೇಲೆ ಅತ್ಯಾಚಾರದ ದೂರು ದಾಖಲಿಸಿದ ಮಹಿಳೆಯನ್ನು ದುಷ್ಕರ್ಮಿಗಳು ಜೀವಂತವಾಗಿ ಸುಟ್ಟು ಹಾಕಲು ಯತ್ನಿಸಿದ ಘಟನೆ ಉತ್ತರಪ್ರದೇಶದ ಉನ್ನಾವೊ ಜಿಲ್ಲೆಯ ಬಿಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ.
ಮಹಿಳೆಯ ದೇಹ ಶೇ. 70ರಷ್ಟು ಸುಟ್ಟುಹೋಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಆಕೆ ಘ ಟನೆ ಕುರಿತು ಪೊಲೀಸರಿಗೆ ಹೇಳಿಕೆ ನೀಡಿದ್ದಾಳೆ.
ಮಾರ್ಚ್‌ನಲ್ಲಿ ಮಹಿಳೆ ತನ್ನ ಮೇಲೆ ಶಿವಂ ಮತ್ತು ಶುಭಮ್ ಅವರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ರಾಯ್ ಬರೇಲಿಯ ಲಾಲ್‌ಗಂಜ್ ಪೊಲೀಸ್ ಠಾಣೆಯಲ್ಲಿ ಪೊಲೀಸ್ ದೂರು ನೀಡಿದ್ದರು. ಇದರಿಂದ ಆಕ್ರೋಶಗೊಂಡಿದ್ದ ಆರೋಪಿಗಳು ಆಕೆ ತನ್ನ ವಕೀಲರನ್ನು ಭೇಟಿಯಾಗಲು ರಾಯ್ ಬರೇಲಿಗೆ ಇತರರೊಂದಿಗೆ ಸೇರಿಕೊಂಡು ಆಕೆಯ ಮೇಲೆ ಪೆಟ್ರೋಲ್ ಸುರಿದು ಜೀವಂತ ದಹಿಸಲು ಯತ್ನಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.